ಜಿಲ್ಲಾ ಪಂಚಾಯತ್ ಚಾಮರಾಜನಗರ, ಯುವ ಸಭಲೀಕರಣ, ಕ್ರೀಡಾ ಇಲಾಖೆ ಚಾಮರಾಜನಗರ ಇವರ ಸಹಯೋಗದಲ್ಲಿ ಯಳಂದೂರು ಮತ್ತು ಕೊಳ್ಳೇಗಾಲ ತಾಲ್ಲೂಕುಗಳ, 2025-26 ನೇ ಸಾಲಿನ ದಸರಾ ಕ್ರೀಡಾ ಕೂಟವನ್ನು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿತ್ತು. ಮಹದೇಶ್ವರ ಕಾಲೇಜು ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಕ್ರೀಡಾಕೂಟವನ್ನು ಕೊಳ್ಳೇಗಾಲ ಶಾಸಕರು ಎ. ಆರ್. ಕೃಷ್ಣಮೂರ್ತಿಯವರು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಸಿ ಶಾಸಕರು ಮಾತನಾಡಿ, ನಾನು ಕೂಡ ವಿದ್ಯಾರ್ಥಿಯಾಗಿದ್ದ ಸಂದರ್ಭದಲ್ಲಿ ಕ್ರೀಡೆಯಲ್ಲಿ ಕೋ ಕೋ ಪಂದ್ಯಾವಳಿ, ಹಾಗೂ ಬಾಸ್ಕೆಟ್ ಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದೇನೆ, ಆದ್ದರಿಂದ ಕ್ರೀಡೆಯ ಮೇಲೆ ವಿಶೇಷ ಆಶಕ್ತಿ ಮತ್ತು ಒಲವು ಜಾಸ್ತಿ, ಆದ್ದರಿಂದ ಕ್ರೀಡಾಂಗಣಕ್ಕೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಸಿದ್ದೇನೆ ಕೊಳ್ಳೇಗಾಲದಲ್ಲಿರುವ ಕ್ರೀಡಾಂಗಣದಲ್ಲಿ ಒಳಾಂಗಣ ಕ್ರೀಡಾಂಗಣ, ಹೊರಾಂಗಣ ಕ್ರೀಡಾಂಗಣ ಅಭಿವೃದ್ಧಿಗೆ 3 ಕೋಟಿ ಅನುದಾನವನ್ನು ಕೊಡಿಸಿದ್ದೇನೆ ಈಗಾಗಲೇ ಬಾಸ್ಕೆಟ್ ಬಾಲ್ ಕ್ರೀಡಾಂಗಣವನ್ನು ನಿರ್ಮಾಣ ಮಾಡಿಸಿದ್ದೇವೆ, ಹಾಗೂ ಕ್ರೀಡಾಂಗಣದ ಸುತ್ತ ಪ್ರೇಕ್ಷಕರಿಗೆ ಕುಳಿತುಕೊಳ್ಳಲು ಪ್ರೆವೀಲೆನ್ ಅನ್ನು ನಿರ್ಮಾಣ ಮಾಡಿಸಲಾಗುವುದು, ಮುಂದಿನ ದಿನಗಳಲ್ಲಿ ಕ್ರೀಡಾ ಪಟುಗಳು ಕ್ರಿಕೆಟ್ ಅಥವಾ ಇನ್ನಿತರ ಯಾವುದೇ ಕಾರ್ಯಕ್ರಮಗಳು ಹಾಗೂ ರಾಷ್ಟ್ರೀಯ ಹಬ್ಬಗಳನ್ನು ಅಂದರೆ ಸ್ವಾತಂತ್ರ ದಿನಾಚರಣೆ, ಸಂವಿಧಾನ ದಿನಾಚರಣೆ, ಕನ್ನಡ ರಾಜ್ಯೋತ್ಸವ, ಎಲ್ಲ ಹಬ್ಬಗಳನ್ನು ಕೂಡ ಮಹದೇಶ್ವರ ಕ್ರೀಡಾಂಗಣದಲ್ಲಿ ನಡೆಸಲು ಅನುಕೂಲವಾಗುತ್ತದೆ ಎಂದರು.
ಕ್ರೀಡಾಕೂಟದ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ನಗರಸಭೆ ಅಧ್ಯಕ್ಷರು ರೇಖಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರು ಚಂದ್ರು, ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ತಾ.ಪಂ ಇಒ ಗುರುಶಾಂತಪ್ಪ ಬೆಳ್ಳುಂಡಗಿ, ಬಿಇಒ ಮಂಜುಳಾ, ಮಹದೇಶ್ವರ ಕಾಲೇಜು ಪ್ರಾಂಶುಪಾಲರು ಜಯಲಕ್ಷ್ಮೀ, ಕ್ರೀಡಾ ಇಲಾಖೆಯ ಸುರೇಶ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ತೋಟೇಶ್ ಹಾಗೂ ಕ್ರೀಡಾಪಟುಗಳು ಇತರರು ಇದ್ದರು.