ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡದ ಪೊಲೀಸರು ಚುರುಕುಗೊಳಿಸಿದ್ದಾರೆ. ಇದೀಗ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು ಬುರುಡೆ ಗ್ಯಾಂಗ್‌ಗೆ ಫಂಡಿಂಗ್ ಮಾಡಿದ್ದ 11 ಮಂದಿಗೆ ಎಸ್‌ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಹೌದು, ಷಡ್ಯಂತ್ರದ ಹಿಂದಿನ ಕಾಣದ ಕೈಗಳ ಬೆನ್ನುಬಿದ್ದ ಎಸ್‌ಐಟಿ, ಚಿನ್ನಯ್ಯ ಹಾಗೂ ಪತ್ನಿಯ ಅಕೌಂಟ್‌ಗೆ ಹಣ ವರ್ಗಾವಣೆ ಮಾಡಿದವರ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೇ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನ ಕುಟುಂಬದ ಪ್ರತಿಯೊಬ್ಬರ ಖಾತೆಯ ಡಿಟೇಲ್ ಪಡೆದು ದಾಖಲೆಗಳನ್ನು ಕಲೆ ಹಾಕುತ್ತಿದ್ದಾರೆ.
ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಸೇರಿದಂತೆ 11 ಜನರಿಗೆ ಎಸ್‌ಐಟಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಈಗಾಗಲೇ 6 ಮಂದಿಯನ್ನು ವಿಚಾರಣೆ ನಡೆಸಿದ್ದಾರೆ. ಗಿರೀಶ್ ಮಟ್ಟಣ್ಣವರ್ ಪತ್ನಿಯ ಖಾತೆಯಿಂದಲೂ ಚಿನ್ನಯ್ಯನಿಗೆ ಹಣ ವರ್ಗಾವಣೆಯಾಗಿರುವುದು ತನಿಖೆಯಲ್ಲಿ ಬಯಲಾಗಿದೆ.
ಎಸ್‌ಐಟಿ ಅಧಿಕಾರಿಗಳು 6 ತಿಂಗಳ ಹಿಂದೆ ಹಣ ವರ್ಗಾವಣೆ ಆಗಿರುವ ಬಗ್ಗೆಯೂ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಫಂಡಿಂಗ್ ಮಾಡಿರುವ ಬಗ್ಗೆಯೂ ಮಾಹಿತಿ ಪಡೆದಿದ್ದು, ಅವರಿಗೂ ಎಸ್‌ಐಟಿ ನೋಟಿಸ್ ನೀಡುವ ಸಾಧ್ಯತೆಗಳಿವೆ.