ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಸೆ.29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಉಪಸಾಗರದ ಉತ್ತರ ಒಡಿಶಾ, ಆಂಧ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆ.23ರಿಂದ ಸೆ.29ರವರೆಗೆ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ಕರಾವಳಿ ಭಾಗ ಹಾಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.