Ad image

ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ

Team SanjeMugilu
1 Min Read

ಬಳ್ಳಾರಿ: ಅಡುಗೆ ಸಿಲಿಂಡರ್‌ ಸ್ಫೋಟಗೊಂಡ  ಪರಿಣಾಮ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೋಸಪೇಟೆ  ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ.

ಮನೆಯಲ್ಲಿ ಎಲ್ಲರೂ ಮಲಗಿರುವಾಗ ಬೆಳಗ್ಗಿನ ಜಾವ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆಯೇ ಕುಸಿದಿದ್ದು, ವಕೀಲ ಹಾಲಪ್ಪ, ಸಹೋದರ ಮೈಲಾರಪ್ಪ ಸೇರಿದಂತೆ ಒಂದೇ ಕುಟುಂಬದ 8 ಮಂದಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನ‌ ಬಳ್ಳಾರಿ  ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ, ಹೊಸಪೇಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಘಟನಾ ಸ್ಥಳ ಪರಿಶೀಲಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.

Share This Article