ಬೆಂಗಳೂರು: ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್‌ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಮಾಡಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಧರ್ಮಸ್ಥಳ ಕೇಸ್‌ನಲ್ಲಿ ಬುರುಡೆ ಗ್ಯಾಂಗ್ ಮೋಸ ಮಾಡಿರೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಎಂಬ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ ಕೆಲಸ ಈ ಸರ್ಕಾರ ಮಾಡಿದೆ. ಎಸ್‌ಐಟಿಯನ್ನ ತರಾತುರಿಯಲ್ಲಿ ಈ ಸರ್ಕಾರ ಮಾಡಿತು. ಎಸ್‌ಐಟಿ ತನಿಖೆ ಮಾಡಿದ್ರು. ಇವರಿಗೆ ಏನು ಸಿಕ್ತು? ಏನು ಸಿಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದರು.
ಡಿಕೆ ಶಿವಕುಮಾರ್ ಅವರು ಸದನದಲ್ಲಿ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಎಂದು ಹೇಳಿದ್ದರು. ಆದರೆ ಷಡ್ಯಂತ್ರ ಮಾಡಿದವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಧಾರ್ಮಿಕ ಕ್ಷೇತ್ರಕ್ಕೆ ಅಪಮಾನ ಮಾಡೋ ಕೆಲಸ ಮಾತ್ರ ಈ ಸರ್ಕಾರ ಮಾಡಿದೆ ಎಂದು ಹರಿಹಾಯ್ದರು.