ಬಳ್ಳಾರಿ: ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಕೆಡಿಪಿ ಸಭೆಗೆ ಆಗಮಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ ಯಾವುದೇ ನಿರ್ಧಾರ ಇಲ್ಲ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳಲಿದೆ. ನಾಗೇಂದ್ರ ಮತ್ತೇ ಸಚಿವರಾಗ್ತಾರೆ. 10 ದಿನದಲ್ಲಿ ನಾಗೇಂದ್ರ ಅವರಿಗೆ ಸಚಿವಗಿರಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತಾರಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. ಐದು ವರ್ಷ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಪ್ರಶ್ನಿಸಿದರು. ಒಂದು ವರ್ಷದ ನಂತರ ಜಿಲ್ಲೆಗೆ ಆಗಮಿಸಿದ್ದಕ್ಕೆ ಕೇಳಿದ ಪ್ರಶ್ನೆಗೆ, ಬಳ್ಳಾರಿಯ ಯಾವ ಕೆಲಸಗಳು ಬಾಕಿ ಉಳಿದಿಲ್ಲ. ಎಲ್ಲಾ ಕೆಲಸ ಕೆಲಸ ಕಾರ್ಯಗಳು ನಡೆಯುತ್ತಿವೆ. ನಾಗೇಂದ್ರ ಮೂಲಕ ಸಮಸ್ಯೆಗಳು ನನಗೆ ಮಾಹಿತಿ ಬರುತ್ತಿವೆ. ಇನ್ನು ಮುಂದೆ ಬಳ್ಳಾರಿಗೆ ಬರುತ್ತೇನೆ ಎಂದು ಹೇಳಿದರು.
ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಾಲ್ಕು ಸ್ಥಳಗಳನ್ನು ಗುರುತಿಸಲಾಗಿದೆ. ಬಳ್ಳಾರಿ ಶಾಸಕರೊಂದಿಗೆ ಸೇರಿ ಸ್ಥಳ ಪರಿಶೀಲನೆ ಮಾಡುತ್ತೇವೆ. ಇಂದು ಜಾಗ ಅಂತಿಮವಾಗಲಿದ್ದು, ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ತಿಳಿಸಿದರು.