Ad image

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ-ಬಲಿದಾನ ಸದಾ ನಮಗೆ ಆದರ್ಶ: ಸಿದ್ದರಾಮಯ್ಯ

Team SanjeMugilu
1 Min Read

ಮೈಸೂರು: ಅ.2 ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ ಹೋರಾಟದ ಫಲದಿಂದ ನಾವಿಂದು ಸ್ವಾತಂತ್ರ್ಯವನ್ನು ಅನುಭವಿಸುತ್ತಿದ್ದೇವೆ. ಅವರ ತ್ಯಾಗ, ಬಲಿದಾನ ಸದಾ ನಮಗೆ ಆದರ್ಶಪ್ರಾಯವಾಗಿರುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗಾಂಧಿ ಜಯಂತಿ ಪ್ರಯುಕ್ತ ಮೈಸೂರಿನ ಮಹಾತ್ಮ ಗಾಂಧಿ ವೃತ್ತದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಬಳಿಕ ಮಾಧ್ಯಮದವರ ಜೊತೆ ಸಿಎಂ ಮಾತನಾಡಿದರು. ಅ.2 ರಂದು ಮಾಜಿ ಪ್ರಧಾನ ಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನವೂ ಕೂಡಾ ಹೌದು. ದೇಶ ಕಂಡ ಅತ್ಯಂತ ಪ್ರಾಮಾಣಿಕ ಪ್ರಧಾನಿ ಅವರು ಎಂದು ಶಾಸ್ತ್ರಿ ಅವರನ್ನು ಸಿಎಂ ಸ್ಮರಿಸಿದರು.

ಕಾಕತಾಳೀಯ ಎಂಬಂತೆ ಇಂದು ವಿಜಯದಶಮಿಯೂ ಬಂದಿದ್ದು, ನಾಡಿನ ಸಮಸ್ತ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Share This Article