ಚಿಂತಾಮಣಿ: ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ನಟ ಪವನ್ ಕಲ್ಯಾಣ್ಗೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಸನ್ಮಾನ ಮಾಡಿದ್ದಾರೆ. ಈ ವೇಳೆ ಪವನ್ ಕಲ್ಯಾಣ್ಗೆ ಸಾವಿರಾರು ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ಬಳಿಕ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಪವನ್ ಕಲ್ಯಾಣ್, ಗೋಪಾಲಗೌಡರು ಜನಸೇನಾ ಪಕ್ಷಕ್ಕೆ ಬಲ ತುಂಬಿದವರು. ಅವರಿಂದಲೇ ನಾನು ರಾಜಕೀಯ ಬಂದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರಿಗೆ ಆಹಾರ ಕೊಡುವ ಅಕ್ಷಯ ಪಾತ್ರೆ. ಹೀಗಾಗಿ ನೀರಾವರಿ ಯೋಜನೆ ಬಗ್ಗೆ ನನ್ನ ಪ್ರಯತ್ನ ಮಾಡ್ತೇನೆ. ಆಂಧ್ರ ಪ್ರದೇಶಕ್ಕೆ ಕರ್ನಾಟಕದ ಮೇಲೆ ತುಂಬಾ ಪ್ರೀತಿ ಇದೆ. ನಾವೆಲ್ಲಾ ಒಂದೇ ತಾಯಿಯ ಮಕ್ಕಳು ಎಂದು ಹೇಳಿದ್ದಾರೆ.
ಇನ್ನು ಸಮಾವೇಶದಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವ ಸೋಮಣ್ಣ ಕೂಡ ಮಾತನಾಡಿ ಪವನ್ ಕಲ್ಯಾಣ್ ಸನಾತನ ಧರ್ಮವನ್ನ ಕಾಪಾಡ್ತಿದ್ದಾರೆ. ಅವರು ಭವಿಷ್ಯದ ನಾಯಕ ಎಂದು ಹಾಡಿಹೊಗಳಿದ್ದಾರೆ.
ಇದಕ್ಕೂ ಮುನ್ನ ಮಾತನಾಡದ ಮಾಜಿ ಶಾಸಕ ಕೃಷ್ಣಾರೆಡ್ಡಿ, ಗೋಪಾಲಗೌಡರ ಹುಟ್ಟುಹಬ್ಬ ಒಂದು ನೆಪ ಮಾತ್ರ. ಕೋಲಾರ ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗಕ್ಕೆ ಕೃಷ್ಣಾನದಿ ನೀರನ್ನು ಹರಿಸಲು ಈ ಕಾರ್ಯಕ್ರಮ ಮಾಡಲಾಗಿದೆ. ಅವರ ಹೆಸರಿನಲ್ಲಿ ಕೃಷ್ಣಾನದಿ ನೀರು ತರಲು ಮುಂದಾಗಿದೆ. ಸನಾತನಧರ್ಮ ಬಗ್ಗೆ ಅವರಿಗೆ ಕಾಳಜಿ ಹೆಚ್ಚಿದೆ. ದಕ್ಷಿಣ ಭಾರತದಲ್ಲಿ ಕಲರಿ ಕಲೆಯನ್ನು ಕಲೆತ್ತಿರುವ ನಾಯಕ ಪವನ್ ಕಲ್ಯಾಣ್, ಆಧ್ಯಾತ್ಮಿಕ, ಸನಾತನ ಧರ್ಮಕ್ಕೆ ಸಹಕಾರಿ ಕೊಡುತ್ತಿರುವ ನಾಯಕ. ಕೃಷ್ಣಾ ನದಿ ನೀರು ತಂದರೆ ನಮ್ಮ ಭಾಗಕ್ಕೆ ಅನುಕೂಲವಾಗಲಿದೆ. ನಮ್ಮ ಜಿಲ್ಲೆಯಲ್ಲಿ 2 ಸಾವಿರ ಅಡಿ ಬೋರ್ ವೆಲ್ ಕೊರೆದರೂ ನೀರು ಸಿಗಲ್ಲ. ನಮಗೆ ಕುಡಿಯುವ ನೀರು ಬೇಕು, ಎತ್ತಿನಹೊಳೆ ಯೋಜನೆ ಇದುವರೆಗೂ ಇಂದಿನ ಸಿಎಂ ತರಲು ವಿಫಲರಾಗಿದ್ದಾರೆ. ಎತ್ತಿನಹೊಳೆಗೆ 30 ಸಾವಿರ ಕೋಟಿ ರೂಪಾಯಿ ಖರ್ಚಾಗಿದೆ. ಕೃಷ್ಣಾನದಿ ನೀರು ಬಂದರೆ ಮೂರು ಜಿಲ್ಲೆಗಳಿಗೆ ಅನುಕೂಲವಾಗಲಿದೆ. ನೀವು ಆಂಧ್ರ ಸಿಎಂ ಚಂದ್ರಬಾನು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮಾತನಾಡಿ ಕೃಷ್ಣಾನದಿ ನೀರು ತರಬೇಕು. ನೀವು ವೇದಿಕೆಯಲ್ಲಿಯೇ ಭರವಸೆ ಕೊಡಬೇಕು ಎಂದು ಒತ್ತಾಯ ಮಾಡಿದರು.
ಖಂಡಿತ ನೀರು ಕೊಡಿಸುತ್ತಾರೆ: ನಿವೃತ್ತ ನ್ಯಾ. ವಿ ಗೋಪಾಲ ಗೌಡ
ಆ ಬಳಿಕ ಮಾತನಾಡಿದ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ವಿ ಗೋಪಾಲ ಗೌಡ ಮಾತನಾಡಿ, ನೀವು ಪವನ್ ಕಲ್ಯಾಣ್ ಅವರಿಗಾಗಿ ಬಂದಿದ್ದೀರಾ, ಆದ್ದರಿಂದ ನಾನು ತುಂಬಾ ಮಾತನಾಡಲು ಹೋಗುವುದಿಲ್ಲ. ನನಗೆ ಆತ್ಮೀಯ ಸ್ನೇಹಿತ, ದೇಶದಲ್ಲಿ ಪ್ರಖ್ಯಾತಿ ಪಡೆದುಕೊಂಡ ಪವನ್ ಕಲ್ಯಾಣ್ ಬಂದಿದ್ದಾರೆ. ಅವರಿಗೆ ಆರೋಗ್ಯ ಸರಿಯಿಲ್ಲಾದಿದ್ರು, ನಿಮಗಾಗಿ, ನನಗಾಗಿ ಹೈದರಾಬಾದ್ ನಿಂದ ಬಂದಿದ್ದಾರೆ.
ಪವನ್ ಕಲ್ಯಾಣ್ ಅವರಿಗೆ 10 ದಿನಗಳಿಂದ ಆರೋಗ್ಯ ಸರಿಯಿರಲಿಲ್ಲ. ಯುವ ಜನತೆ,ರೈತರು, ಮಹಿಳೆಯ ಪರ ಆಲೋಚನೆ ಮಾಡುವಂತಹ ನಾಯಕ ಪವನ್ ಕಲ್ಯಾಣ್, ಇಂದು ಆಂಧ್ರದಲ್ಲಿ ಗ್ರಾಮೀಣ, ಅರಣ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ನಟನೆಯಲ್ಲಿ ಪ್ರಜೆಗಳಿಗಾಗಿ, ದಲಿತರಿಗಾಗಿ, ಮಹಿಳೆಯರಿಗಾಗಿ ಸೇವೆ ಸಲ್ಲಿಸಿದ್ದಾರೆ. ನಮ್ಮ ಜಿಲ್ಲೆಗಳಲ್ಲಿ ಕುಡಿಯುವ ನೀರಿಗೆ ಆಂತಕ ಇದೆ. ಕೃಷ್ಣಾನದಿಯಿಂದ ಸಿಎಂ ಗೆ ಮನವಿ ಮಾಡಿ ನಮ್ಮ ಜನರಿಗೆ ಕುಡಿಯುವ ನೀರು ತರಿಸಬೇಕು. ನಮಗೆ ನೀರು ಕೊಡಿಸುತ್ತಾರೆ ಅದರಲ್ಲಿ ಯಾವುದೇ ಸಂದೇಹ ಇಲ್ಲ. ನಾನು ನಿವೃತ್ತರಾದ್ರು ನಿಮ್ಮ ಸೇವೆ ಮಾಡುತ್ತೇನೆ ಎಂದು ಹೇಳಿದರು.
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ ನದಿ ನೀರು; ಬಯಲುಸೀಮೆ ಜನರ ಬೇಡಿಕೆ
