Ad image

ಆರ್‌ಎಸ್‌ಎಸ್‌ ಮುಖಂಡ,ಮಾಜಿ ಪರಿಷತ್‌ ಸದಸ್ಯ ಪ್ರೊ.ನರಹರಿ ನಿಧನ

Team SanjeMugilu
0 Min Read

ಬೆಂಗಳೂರು: ಆರ್‌ಎಸ್‌ಎಸ್  ಮುಖಂಡ, ಮಾಜಿ ಪರಿಷತ್‌ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ.

ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು.

ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ ಅಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ದಿ ಮಿಥಿಕ್ ಸೊಸೈಟಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ತುರ್ತು ಪರಿಸ್ಥಿತಿಯ ವಿರುದ್ಧವೂ ಹೋರಾಟ ಮಾಡಿ ಜೈಲುವಾಸ ಅನುಭವಿಸಿದ್ದರು. ನರಹರಿ ಅವರ ನಿಧನಕ್ಕೆ ಸಂಘದ ಪ್ರಮುಖರು, ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ.

Share This Article