ಮಡಿಕೇರಿ: ಇಲ್ಲಿನ ಹರ್ ಮಂದಿರ್ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ ಹರ್ ಮಂದಿರ್ ಶಾಲೆಯಲ್ಲಿ ಎರಡನೇ ವ್ಯಾಸಂಗ ಮಾಡುತ್ತಿದ್ದ. ಇಂದು ಬೆಳಗ್ಗೆ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾನೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣಾ ಸರ್ಕಲ್ ಇನ್ಸ್ಪೆಕ್ಟರ್ ಚಂದ್ರಶೇಖರ್, ಫೈರ್ ಬ್ರಿಗೇಡ್ ಅಧಿಕಾರಿ ನಾಗರಾಜ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಪೋಷಕರು ಸಹ ಸ್ಥಳಕ್ಕಾಗಮಿಸಿದ್ದಾರೆ.