Ad image

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಪೋಕ್ಸೊ ಕೇಸ್ ಆರೋಪಿ ಆತ್ಮಹತ್ಯೆ

Team SanjeMugilu
0 Min Read

ಬೆಂಗಳೂರು: ಸಿಟಿ ಸಿವಿಲ್ ಕೋರ್ಟ್  ಆವರಣದಲ್ಲಿ ಆರೋಪಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೋರ್ಟ್‌ನ 5ನೇ ಫ್ಲೋರ್‌ನಿಂದ ಬಿದ್ದು ಗೌತಮ್ ಎಂಬ ಆರೋಪಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಚಾರಣೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಆರೋಪಿಯನ್ನು ಕೋರ್ಟ್ಗೆ ಕರೆತರಲಾಗಿತ್ತು. ಈ ವೇಳೆ ಕೋರ್ಟ್ನ ಮಹಡಿಯಿಂದ ಆರೋಪಿ ಜಿಗಿದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಮೃತಪಟ್ಟಿದ್ದಾನೆ.

ಪೋಕ್ಸೊ ಕೇಸಲ್ಲಿ ಆರೋಪಿಯನ್ನ ಕೋರ್ಟ್‌ಗೆ ಕರೆತರಲಾಗಿತ್ತು. ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನ ಕೋರ್ಟ್ಗೆ ಕರೆತಂದಾಗ ಕುಟುಂಬದವರು ಕೂಡ ಉಪಸ್ಥಿತರಿದ್ದರು. ಅವಮಾನ ತಾಳಲಾರದೆ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Share This Article