ಓಸ್ಲೋ: ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನಿರಾಸೆಯಾಗಿದೆ. ನೆಜುವೆಲಾದ ವಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ ಪ್ರಶಸ್ತಿ ಸಿಕ್ಕಿದೆ.
ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವರ ಅವಿಶ್ರಾಂತ ಕೆಲಸ ಮತ್ತು ಸರ್ವಾಧಿಕಾರದಿಂದ ಪ್ರಜಾಪ್ರಭುತ್ವಕ್ಕೆ ನ್ಯಾಯಯುತ ಮತ್ತು ಶಾಂತಿಯುತ ಪರಿವರ್ತನೆಯನ್ನು ಸಾಧಿಸಲು ಹೋರಾಟ ನಡೆಸುತ್ತಿರುವ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೇಜಿಯನ್ ನೊಬೆಲ್ ಸಮಿತಿ ನಿರ್ಧರಿಸಿದೆ.
ಇಂದು ಸಹ ಟ್ರಂಪ್ ನಾನು 8 ಯುದ್ಧಗಳನ್ನು ನಿಲ್ಲಿಸಿದ್ದೇನೆ. ಬರಾಕ್ ಒಬಾಮ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿ ನನಗೆ ನೊಬೆಲ್ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದರು.
