ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ರಾತ್ರಿ ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತ ಮುತ್ತ ಭೂಕಂಪನದ ಅನುಭವವಾಗಿದ್ದು, ಭಾರೀ ಸದ್ದಿಗೆ ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿದ್ದಾರೆ. ಭೂಮಿ ಕಂಪಿಸಿದ ಅನುಭವದ ಬಗ್ಗೆ ಜನರು ಆತಂಕ ಹೊರಹಾಕಿದ್ದಾರೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ.
ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತ ಮುತ್ತ ರಾತ್ರಿ ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ತಿಕೋಟ ಹಾಗೂ ವಿಜಯಪುರ ತಾಲೂಕಿನಲ್ಲಿ ಭೂಕಂಪನ ಅನುಭವಕ್ಕೆ ಜನರು ಬೆಚ್ಚಿ ಬಿದ್ದಿದ್ದಾರೆ.
2.8 ರಷ್ಟು ಭೂಕಂಪನದ ತೀವ್ರತೆ ದಾಖಲು
ಹೊನ್ನೂಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ, ಸೇರಿ ತಿಕೋಟ ತಾಲೂಕಿನ ಕೆಲ ಭಾಗಗಳಲ್ಲಿ ಭೂಕಂಪನ ಸಂಭವಿಸಿದೆ ಎನ್ನಲಾಗ್ತಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದೆ.
ಭಾರೀ ಸದ್ದಿನ ಬಗ್ಗೆ ಸ್ಥಳೀಯರ ಆತಂಕ
ಮೇಲಿಂದ ಮೇಲೆ ಭೂಕಂಪ ಸಂಭವಿಸುತ್ತಿದ್ದು, ಭಾರೀ ಸದ್ದಿನ ಬಗ್ಗೆ ಸ್ಥಳೀಯರು ಆತಂಕ ಹೊರಹಾಕಿದ್ದಾರೆ. ಕಳೆದ ತಿಂಗಳು ಸಿಂದಗಿ ಪಟ್ಟಣದಲ್ಲಿ ಸರಣಿ ರೂಪದಲ್ಲಿ ಭೂಕಂಪನ ಅನುಭವವಾಗಿತ್ತು. ಈಗ ನಗರ ಭಾಗದಲ್ಲಿ ಕಂಪನದ ಅನುಭವವಾಗಿದೆ.
ವಿಜಯಪುರ ಜಿಲ್ಲೆಯಲ್ಲಿ ನಡುಗಿದ ಭೂಮಿ! ಮನೆಯಿಂದ ಹೊರಗೆ ಓಡಿದ ಜನ!
