ಬಾಗಲಕೋಟೆ: ಆರ್‌ಎಸ್‌ಎಸ್ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಂಡಿಗಣಿಯಲ್ಲಿ ಮಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ ಎಂದರು.
ಇಂದು ರಾತ್ರಿ ನಡೆಯಲಿರುವ ಡಿನ್ನರ್ ಪಾರ್ಟಿಗೂ ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ನಾನು ಆಗಾಗ ಊಟ ನೀಡುತ್ತಿರುತ್ತೇನೆ. ಊಟದಲ್ಲಿ ಏನೂ ಸ್ಪೆಷಲ್ ಇಲ್ಲ. ಮಾಧ್ಯಮದವರಿಗೆ ಮತ್ತು ಬಿಜೆಪಿಯವರಿಗೆ ಮಾತ್ರ ವಿಶೇಷ ಎಂದು ತಿಳಿಸಿದರು.
ದೇವೇಗೌಡರ ಆರೋಗ್ಯ ಚೆನ್ನಾಗಿದೆ, ಚೇತರಿಕೆ ಆಗುತ್ತಿದೆ. ವೈದ್ಯ ಸತ್ಯನಾರಾಯಣ ಅವರ ಜೊತೆ ಮಾತನಾಡಿದ್ದೇನೆ. ಎರಡ್ಮೂರು ದಿನಗಳಲ್ಲಿ ಚೇತರಿಕೆ ಆಗುತ್ತಾರೆ ಎಂದಿದ್ದಾರೆ ಎಂದು ನುಡಿದರು.