Ad image

ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ – ಚಾಮುಂಡಿ ಬೆಟ್ಟಕ್ಕೆ ರಿಷಬ್ ಶೆಟ್ಟಿ ಭೇಟಿ

Team SanjeMugilu
1 Min Read

ಮೈಸೂರು: ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಹಿನ್ನೆಲೆ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.

ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ ರೀತಿ ಈ ಬಾರಿಯೂ ಇನ್ನೊಂದು ಚಾಪ್ಟರ್ ಜನರಿಗೆ ತಲುಪಿರುವ ರೀತಿ ಹಾಗೂ ಅವರು ಒಪ್ಪಿಕೊಂಡಿರುವ ರೀತಿ ತುಂಬಾ ಖುಷಿಯಾಗಿದೆ ಎಂದು ತಿಳಿಸಿದರು. ಚಾಮುಂಡಿ ಬೆಟ್ಟದಿಂದ ನಂಜನಗೂಡಿಗೆ ಭೇಟಿ ನೀಡಿ ಶ್ರೀಕಂಠೇಶ್ವರ ಸ್ವಾಮಿ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸಂಜೆ 4ಗಂಟೆಗೆ ಮೈಸೂರಿನ ಗಾಯತ್ರಿ ಚಿತ್ರಮಂದಿರಕ್ಕೆ ಭೇಟಿ ನೀಡಲಿದ್ದಾರೆ.

Share This Article