ಮಂಡ್ಯ: ಮಳವಳ್ಳಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಮೂರು ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂಬ ಆತಂಕ ಎದುರಾಗಿದೆ.
ಮೂರು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಮೂರು ಬಸ್ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮಳವಳ್ಳಿಯ ಬಾಚನಹಳ್ಳಿ ಸಮೀಪ ಘಟನೆ ನಡೆದಿದ್ದು, ಮಳವಳ್ಳಿ ಮಾರ್ಗವಾಗಿ ಮಹದೇಶ್ವರನ ಬೆಟ್ಟಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಕೊಳ್ಳೆಗಾಲ ಕಡೆಯಿಂದ ಮಳವಳ್ಳಿಗೆ ಬರುತ್ತಿದ್ದ KSRTC ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಇಬ್ಬರು ಮಹಿಳೆಯರು, ಓರ್ವ ಪುರುಷ ಸಾವು
ಅಪಘಾತದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪಾಕಿ ಇಬ್ಬರು ಮಹಿಳೆ ಹಾಗೂ ಓರ್ವ ಪುರುಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರೋದಾಗಿ ಮಾಹಿತಿ ಲಭ್ಯವಾಗಿದೆ. ಮೃತರ ವಿವರ ಮತ್ತು ಮಾಹಿತಿ ತಿಳಿದು ಬಂದಿಲ್ಲ, ಹೀಗಾಗಿ ಈ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕ್ತಿದ್ದಾರೆ.
ಎರಡು ಬಸ್ ಡಿಕ್ಕಿ, ಬಳಿಕ ಮತ್ತೊಂದು ಬಸ್ ಡಿಕ್ಕಿ
ಮೂರು KSRTC ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಈ ಘಟನೆಯಲ್ಲಿ 10 ಜನ ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಅಂತ ತಿಳಿದು ಬಂದಿದೆ. ಮೊದಲು ಎರಡು ಬಸ್್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಆಗ ಡಿಕ್ಕಿಯಾಗಿ ನಿಂತಿದ್ದ ಬಸ್ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನೆ
ಗಾಯಾಳುಗಳನ್ನು ಮಳವಳ್ಳಿ ಆಸ್ಪತ್ರೆಗೆ ರವಾನೆ ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಗಾಯಗೊಂಡವರು ಮೈಸೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ
ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.