Ad image

ಹೋಮ್ ಸ್ಟೇಯಲ್ಲಿ ರೇವ್‌ ಪಾರ್ಟಿ ಆರೋಪ – 130ಕ್ಕೂ ಹೆಚ್ಚು ಜನರ ಬಂಧನ

Team SanjeMugilu
0 Min Read

ರಾಮನಗರ: ಕಗ್ಗಲೀಪುರ  ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿರುವ ಹೋಮ್‌ ಸ್ಟೇ ಒಂದರಲ್ಲಿ ರೇವ್‌ ಪಾರ್ಟಿ ನಡೆದ ಆರೋಪ ಕೇಳಿಬಂದಿದೆ.

ಪಾರ್ಟಿ ನಡೆಯುತ್ತಿದ್ದಾಗಲೇ ಕಗ್ಗಲೀಪುರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಅಲ್ಲಿದ್ದ 130ಕ್ಕೂ ಹೆಚ್ಚು ಯುವಕ, ಯುವತಿಯರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬೆಂಗಳೂರು ಮೂಲದವರು ಎಂದು ತಿಳಿದು ಬಂದಿದೆ. ಸುಮಾರು ಮಧ್ಯರಾತ್ರಿ 3ಗಂಟೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪಾರ್ಟಿಯಲ್ಲಿ ಮಾದಕ ವಸ್ತುಗಳ ಬಳಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಂಧಿತ ಆರೋಪಿಗಳಿಗೆ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ಹೋಮ್ ಸ್ಟೇ, ಸುಹಾಸ್ ಗೌಡ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ.

Share This Article