Ad image

ಅಫ್ಘಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 7 ಮಂದಿ ಸಾವು

Team SanjeMugilu
1 Min Read

ಕಾಬೂಲ್: ಉತ್ತರ ಅಫ್ಘಾನಿಸ್ತಾನದ ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಪ್ರಬಲ ಭೂಕಂಪ  ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ದುರಂತದಲ್ಲಿ ಈವರೆಗೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 1540ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯೆಯಿದೆ ಎಂದು ವರದಿಗಳು ತಿಳಿಸಿವೆ.

ಗಾಯಗೊಂಡವರನ್ನ ಕೂಡಲೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ವಕ್ತಾರ ಸಮೀಮ್ ಜೋಯಂಡಾ ತಿಳಿಸಿದ್ದಾರೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಪ್ರಕಾರ, ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ 23 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದೆ.

ಈ ಭೂಕಂಪದ ಬೆನ್ನಲ್ಲೇ, ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ತೀವ್ರತೆಯ ಭೂಕಂಪದಿಂದ ಸಾವು-ನೋವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಇದರ ಪರಿಣಾಮ ವ್ಯಾಪಕವಾಗಿರಬಹುದು ಎಂದಿದೆ. ಈ ಭೂಕಂಪವು ಅಫ್ಘಾನಿಸ್ತಾನದ ಪ್ರಮುಖ ನಗರಗಳಲ್ಲಿ ಒಂದಾದ ಮಜಾರ್-ಇ-ಶರೀಫ್ ಬಳಿ ಸಂಭವಿಸಿದೆ.

ಮಧ್ಯ ಸಂಭವಿಸಿದ ಈ ಕಂಪನದ ಅನುಭವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್, ಇರಾನ್‌ನ ಮಶಾದ್ ಮತ್ತು ಪಾಕಿಸ್ತಾನದ ಇಸ್ಲಾಮಾಬಾದ್‌ವರೆಗೂ ಆಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

Share This Article