Ad image

ದರ್ಶನ್ ಅಂಡ್ ಡಿ ಗ್ಯಾಂಗ್ ವಿರುದ್ಧ ದೋಷಾರೋಪ ಪ್ರಕಟಿಸಿದ ಕೋರ್ಟ್​..!

Team SanjeMugilu
1 Min Read

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಇರುವ ದೋಷಾರೋಪವನ್ನು ನ್ಯಾಯಾಧೀಶರು ಪ್ರಕಟಿಸಿದ್ದಾರೆ. ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್​ನ ನ್ಯಾಯಾಧೀಶರು, ಆರೋಪಗಳನ್ನು ಆರೋಪಿಗಳ ಮುಂದೆ ಓದಿ ಹೇಳಿದ್ದಾರೆ.

ನಿಮ್ಮ ಮೇಲಿನ ಆರೋಪಗಳ ಬಗ್ಗೆ ಏನು ಹೇಳ್ತೀರಾ ಎಂದು ನ್ಯಾಯಾಧೀಶರು ಕೇಳಿದರು. ಅದಕ್ಕೆ ಎಲ್ಲಾ ಆರೋಪಿಗಳು ನಮ್ಮ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ನವೆಂಬರ್ 10ಕ್ಕೆ ವಿಚಾರಣೆಯನ್ನು ನ್ಯಾಯಾಧೀಶರು ಮುಂದೂಡಿದರು.

ದೋಷಾರೋಪ ನಿಗದಿ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳು ಬೆಂಗಳೂರಿನ 64 ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಬೆಂಗಳೂರಿನ 64 ಸಿಸಿಹೆಚ್ ಕೋರ್ಟ್‌ಗೆ ಖುದ್ದು ಹಾಜರಾಗಬೇಕು ಎಂದು ಎಲ್ಲಾ ಆರೋಪಿಗಳಿಗೆ ನ್ಯಾಯಾಧೀಶರು ಈ ಮೊದಲೇ ತಿಳಿಸಿದ್ದರು. ಪರಪ್ಪನ ಅಗ್ರಹಾರ ಜೈಲಿನಿಂದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 6 ಆರೋಪಿಗಳನ್ನು ಪೊಲೀಸರು ನ್ಯಾಯಾಲಕ್ಕೆ ಕರೆತಂದರು. ಉಳಿದಂತೆ ಜಾಮೀನಿನ ಮೇಲೆ ಹೊರಗಿದ್ದ 11 ಆರೋಪಿಗಳು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Share This Article