Ad image

ಶೀಲ ಶಂಕಿಸಿ ಪತಿಯಿಂದಲೇ ಪತ್ನಿಯ ಹತ್ಯೆ – ಆರೋಪಿ ಅರೆಸ್ಟ್‌

Team SanjeMugilu
0 Min Read

ಬೆಂಗಳೂರು: ಶೀಲ ಶಂಕಿಸಿ ಪತಿಯೇ  ಪತ್ನಿಯನ್ನು ಹತ್ಯೆಗೈದಿರುವುದು ಅಮೃತಹಳ್ಳಿಯ ಗಂಗಮ್ಮ ಲೇಔಟ್‌ನಲ್ಲಿ ನಡೆದಿದೆ.

ಕೊಲೆಯಾದ ಮಹಿಳೆಯನ್ನು ಪಾವಗಡ ಮೂಲದ ಅಂಜಲಿ (20) ಎಂದು ಗುರುತಿಸಲಾಗಿದೆ. ಆಕೆಯ ಪತಿ ರವಿಚಂದ್ರ ಕೊಲೆಗೈದ ಆರೋಪಿಯಾಗಿದ್ದಾನೆ. ಅಂಜಲಿ ತರಕಾರಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಆರೋಪಿ ಟ್ರಾವೆಲ್ಸ್ ಕಚೇರಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಅಂಜಲಿ ಸುರಪುರ ಮೂಲದ ರವಿಚಂದ್ರನ ಜೊತೆ ಮಹಿಳೆ 2ನೇ ಮದುವೆಯಾಗಿದ್ದಳು. ಮದುವೆ ನಂತರ ಅಮೃತಹಳ್ಳಿಯಲ್ಲಿ ವಾಸವಿದ್ದರು. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ರವಿಚಂದ್ರನನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Share This Article