Ad image

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನಡುವೆ ಇದೆ ಭಾರೀ ಪೈಪೋಟಿ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿ

Team SanjeMugilu
2 Min Read

ಬೆಂಗಳೂರು: ಮೈಸೂರು ಪ್ರವಾಸ ಕೈಗೊಂಡಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಕಾಂಗ್ರೆಸ್​​ ಪಕ್ಷದಲ್ಲಿ ಸಿಎಂ ಸಿದ್ದರಾಮಯ್ಯ  ಹಾಗೂ ಡಿಕೆ ಶಿವಕುಮಾರ್ ನಡುವೆಯೇ ಭಾರೀ ಪೈಪೋಟಿ ಇದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಕ್ರಾಂತಿ-ಗಿಂತಿ ನಡೆದಿಲ್ಲ ಎಲ್ಲಾ ಮೊದಲೇ ತೀರ್ಮಾನವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಗ್ರೇಟರ್ ಮೈಸೂರು ಘೋಷಣೆ
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ ಅವ್ರು, ಅತ್ತ ಡಿಕೆ ಶಿವಕುಮಾರ್ ಗ್ರೇಟರ್ ಬೆಂಗಳೂರು ಘೋಷಣೆ ಮಾಡಿದ್ದಾರೆ. ಇತ್ತ ಪೈಪೋಟಿಗಾಗಿ ಸಿದ್ದರಾಮಯ್ಯ ಅವರು ಗ್ರೇಟರ್ ಮೈಸೂರು ಘೋಷಣೆ ಮಾಡಿದ್ದಾರೆ ಎಂದ್ರು. ಯಾವ ಗ್ರೇಟರ್ ಕೂಡಾ ಆಗುವುದಿಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಸಿದ್ದರಾಮಯ್ಯ ಪತ್ರಕ್ಕೆ ಹೆಚ್​ಡಿಕೆ ಕಿಡಿ
ಪಿಎಂಗೆ ಸಿಎಂ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿ, ಕುಮಾರಸ್ವಾಮಿ, ಇವ್ರ ತಪ್ಪಿಗೆ ಪ್ರಧಾನಿಯನ್ನು ಇಕ್ಕಟ್ಟಿಗೆ ಸಿಲುಕಿಸುವ ತಂತ್ರ ಮಾಡಿದ್ದಾರೆ. ಅದಕ್ಕೆ ಪತ್ರ ಬರೆದಿದ್ದಾರೆ ಅಷ್ಟೇ
ಕೇಂದ್ರ ಸರ್ಕಾರ ಈಗಾಗಲೇ ಎಫ್.ಆರ್. ಪಿ ದರ ನಿಗದಿ ಮಾಡಿದೆ. ಸಿದ್ದರಾಮಯ್ಯ ಅವ್ರು ರೈತರು ಹಾಗೂ ಕಾರ್ಖಾನೆ ಮಾಲೀಕರ ಜೊತೆ ಮೀಟಿಂಗ್ ಮಾಡಿದ್ರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಅಸಮಾಧಾನ ಹೊರಹಾಕಿದ್ರು.
ಹಣದ ಕೊರತೆ ಇದ್ರೆ ನನ್ನ ಸರ್ಕಾರದಲ್ಲಿ ಹಣದ ಕೊರತೆ ಇದೆ ಅಂತ ಸಿಎಂ ಹೇಳಬೇಕು. ಅದನ್ನು ಬಿಟ್ಟು ಕೇಂದ್ರದ ಕಡೆ ಬೊಟ್ಟು ಮಾಡೋದು ಸರಿಯಲ್ಲ. ಗ್ಯಾರಂಟಿ ಸ್ಕೀಮ್ ಉಸ್ತುವಾರಿ ನೋಡಿಕೊಳ್ಳಲು ಕ್ಯಾಬಿನೆಟ್ ಮಟ್ಟದ ಸ್ಥಾನಮಾನ ಕೊಟ್ಟು ದುಡ್ಡು ವೆಚ್ಚ ಮಾಡ್ತಿದ್ದಾರೆ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಕ್ರಾಂತಿನೂ ಆಗಲ್ಲ ವಾಂತಿನೂ ಆಗಲ್ಲ
ನವೆಂಬರ್​ನಲ್ಲಿ ಕ್ರಾಂತಿ ವಿಚಾರವಾಗಿ ಮಾತಾಡಿದ ಕುಮಾರಸ್ವಾಮಿ, ಇಲ್ಲಿ ಕ್ರಾಂತಿನೂ ಆಗಲ್ಲ ವಾಂತಿನೂ ಆಗಲ್ಲ. ಡಿಕೆಶಿ, ಸಿದ್ದರಾಮಯ್ಯ, ಹೈಕಮಾಂಡ್, ಅವರೇನು ಮಾತಾಡಿಕೊಂಡಿದ್ದಾರೆ ನನಗೆ ಗೊತ್ತಿಲ್ಲ. ಜನ 136 ಸೀಟು ಕೊಟ್ರು. ಹಿಂದಿನ ಸರ್ಕಾರದ ತಪ್ಪು ಸರಿ ಮಾಡಿ ಅಂತ ಅಧಿಕಾರ ಕೊಟ್ರು. ಈಗ ಇವ್ರಿಗಿಂತ ಹಿಂದಿನ ಸರ್ಕಾರವೇ ಸರಿಯಿತ್ತು ಅಂತಿದ್ದಾರೆ.
ಡಿಕೆಶಿ ಸಿಎಂ ಆಗ್ತಾರಾ- ಏನಂದ್ರು ಹೆಚ್ಡಿಕೆ
ಡಿಕೆಶಿ ಸಿಎಂ ಆಗ್ತಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಡಿಕೆಶಿ ಸಿಎಂ ಆಗ್ತಾರೋ ಇಲ್ವಾ ಗೊತ್ತಿಲ್ಲ. ಆದ್ರೆ ಪ್ರತಿದಿನ ದೇವರ ಜೊತೆ ಚರ್ಚೆ ಮಾಡ್ತಾರೆ. ಏನಾಗುತ್ತೋ ನೋಡೋಣ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

Share This Article