Ad image

ಜಾಮೀನು ನಿರೀಕ್ಷೆಯಲ್ಲಿದ್ದ ಪವಿತ್ರಾ ಗೌಡಗೆ ಶಾಕ್‌ – ಪುನರ್‌ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

Team SanjeMugilu
1 Min Read

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆದೇಶವನ್ನ ಪುನರ್ ಪರಿಶೀಲಿಸುವಂತೆ ಎ1 ಆರೋಪಿ ಪವಿತ್ರಾ ಗೌಡ  ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ಆರ್. ಮಹಾದೇವನ್ ಅವರಿದ್ದ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಅರ್ಜಿ ವಿಚಾರಣೆ ವೇಳೆ ನಾವು ಆದೇಶ ಮತ್ತು ದಾಖಲೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದ್ದೇವೆ. ಮತ್ತೊಮ್ಮೆ ಪರಿಶೀಲನೆ ನಡೆಸಿ ಆದೇಶ ಮಾಡುವ ಅಗತ್ಯವಿಲ್ಲ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ.

ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ಆದೇಶ ಪರಿಶೀಲನೆ ಕೋರಿ ಸುಪ್ರೀಂಗೆ ಕೊಲೆ ಆರೋಪಿ ಪವಿತ್ರಾ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದರು.

ಮಗಳು ಮತ್ತು ಪೋಷಕರ ಪೋಷಣೆಗಾಗಿ ಜಾಮೀನು ಕೋರಿದ್ದ ಪವಿತ್ರಾ ಗೌಡ, ಏಕಾಂಗಿಯಾಗಿ ಕಾನೂನು ಹೋರಾಟಕ್ಕೆ ಇಳಿದಿದ್ದರು

Share This Article