ಬೆಂಗಳೂರು: ದಾವಣಗೆರೆ ದಕ್ಷಿಣ ನಿಯೋಜಿತ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ಆರೋಗ್ಯ ಹದಗೆಟ್ಟಿದೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ತೀವ್ರ ಅನಾರೋಗ್ಯದ ಹಿನ್ನೆಲೆ ಬೆಂಗಳೂರಿನ ಖಾಸಗು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಶಾಸಕ ಶಾಮನೂರು ಶಿವಶಂಕರಪ್ಪ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆ ರಾಜ್ಯದ ಹಿರಿಯ ನಾಯಕರು ಆಸ್ಪತ್ರೆಗೆ ಆಗಮಿಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
