Ad image

ರೈತನಿಗೆ ಪರಿಹಾರ ವಿಳಂಬ – ಶಿವಮೊಗ್ಗ ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ

Team SanjeMugilu
1 Min Read

ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ನ್ಯಾಯಾಲಯ ಆದೇಶಿಸಿದೆ.

ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ 1 ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ 22 ಲಕ್ಷ ರೂ. ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ 9 ಲಕ್ಷ ರೂ. ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್‌ ಮೊರೆ ಹೋಗಿದ್ದರು.

ವಿಚಾರಣೆ ನಡೆಸಿದ ಶಿವಮೊಗ್ಗದ 2ನೇ ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ 95,88,283 ರೂ. ಪರಿಹಾರವನ್ನು ಪಾವತಿಸುವಂತೆ ಸೂಚಿಸಿತ್ತು. ನ್ಯಾಯಾಲಯದ ಆದೇಶವಾಗಿದ್ದರೂ ಪರಿಹಾರ ನೀಡದ ಹಿನ್ನೆಲೆ ಜಿಲ್ಲಾಧಿಕಾರಿ ಬಳುತ್ತಿರುವ KA 14 G 1234 ನಂಬರ್‌ನ ಕಾರು ಜಪ್ತಿ ಮಾಡುವಂತೆ ಆದೇಶಿಸಲಾಗಿದೆ.

Share This Article