Ad image

ಚಳಿಗೆ ಉತ್ತರ ಕರ್ನಾಟಕ ತತ್ತರ – 9 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ

Team SanjeMugilu
1 Min Read

ಬೆಂಗಳೂರು: ಚಳಿ ಹೆಚ್ಚಾದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ  9 ಜಿಲ್ಲೆಗೆ ಹವಾಮಾನ ಇಲಾಖೆ  ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಹಾವೇರಿ, ಯಾದಗಿರಿ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಶೀತಗಾಳಿ ಬೀಸಲಿದೆ. ಜನರು ಆದಷ್ಟು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಈ 9 ಜಿಲ್ಲೆಗಳಲ್ಲಿ ತಾಪಮಾನ  ದಿಢೀರ್ ಕುಸಿತ ಕಂಡಿದೆ. ಇನ್ನೂ ತಾಪಮಾನ ಕುಸಿಯುವ ಸಾಧ್ಯತೆ ಇದೆ. ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು ಜನ ಜೀವನ ತತ್ತರಗೊಂಡಿದೆ. ಕಳೆದ ಹತ್ತು ವರ್ಷಗಳಲ್ಲಿ ಎರಡನೆಯ ಬಾರಿಗೆ ತಾಪಮಾನ ಕನಿಷ್ಠ ಮಟ್ಟ ತಲುಪಿದೆ. 2023ರಲ್ಲಿ‌ ವಿಜಯಪುರದಲ್ಲಿ 6.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಎರಡೂ ದಿನಗಳ ಕಾಲ ಶೀತಗಾಳಿ ಬೀಸಲಿದ್ದು ವಿಜಯಪುರದಲ್ಲಿ ತಾಪಮಾನ 6 ಡಿಗ್ರಿ ಸೆಲ್ಸಿಯಸ್​ಗೆ ಕುಸಿಯುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share This Article