ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಇಂದು ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಜೂಪಿಟರ್ ಟೆಕ್ನಾಲಜೀಸ್ ಕಾರ್ಖಾನೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಅಂತಸ್ತಿನ ಇಡೀ ಕಟ್ಟಡವನ್ನು ಆವರಿಸಿತ್ತು. ಸುಮಾರು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ಠಾಣೆಗಳ ಸಿಬ್ಬಂದಿ ಮತ್ತು SDRF ತಂಡದ ಹರಸಾಹಸದಿಂದ ನಾಲ್ಕು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು.
ಸದ್ಯ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೂ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಅಂತಸ್ತಿನ ಇಡೀ ಕಾರ್ಖಾನೆ ಬೆಂಕಿಗಾಹುತಿಯಾಗಿದೆ.
ಜೂಪಿಟರ್ ಟೆಕ್ನಾಲಜೀಸ್ ಕಾರ್ಖಾನೆಯಲ್ಲಿ ಈ ಬೆಂಕಿ ದುರಂತ ಸಂಭವಿಸಿದೆ. ಈ ಕಾರ್ಖಾನೆಯಲ್ಲಿ ಮದ್ಯದ ಬಾಟಲಿಗಳ ಸ್ಟಿಕ್ಕರ್, ಲೇಬಲ್ ಮತ್ತು ಹಾಲೋಗ್ರಾಮ್ ತಯಾರಿಕೆಯಲ್ಲಿ ತೊಡಗಿತ್ತು. ಬೆಂಕಿ ಮೊದಲು ಕಟ್ಟಡದ ಮೂರನೇ ಮಹಡಿಯಲ್ಲಿ ಕಾಣಿಸಿಕೊಂಡು ತೀವ್ರಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆಯಿದ್ದು, ನಿಖರ ಕಾರಣ ತಿಳಿದುಬಂದಿಲ್ಲ. ಸಕಾಲಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದರಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸದಂತೆ ತಡೆಯಲಾಗಿದೆ.
10ಕ್ಕೂ ಹೆಚ್ಚು ಅಗ್ನಿಶಾಮಕ ಠಾಣೆ ಸಿಬ್ಬಂದಿ SDRF ತಂಡದಿಂದ ಕಾರ್ಯಾಚರಣೆ
ಘಟನೆಯ ಮಾಹಿತಿ ತಿಳಿದು ಎಲೆಕ್ಟ್ರಾನಿಕ್ ಸಿಟಿ, ಆನೇಕಲ್, ಜಯನಗರ ಸೇರಿದಂತೆ 8 ಅಗ್ನಿಶಾಮಕ ಠಾಣೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಹತ್ತಕ್ಕೂ ಹೆಚ್ಚು ವಾಹನಗಳು ಮತ್ತು SDRF ತಂಡದ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು. ಬೆಂಕಿಯ ಜ್ವಾಲೆಗಳು ದೂರದಿಂದಲೇ ಕಾಣುವಂತಿದ್ದು, ದಟ್ಟ ಹೊಗೆ ಆವರಿಸಿತ್ತು. ಸಿಬ್ಬಂದಿ ಹರಸಾಹಸಪಟ್ಟು ಬೆಂಕಿಯನ್ನು ನಿಯಂತ್ರಿಸಿ, ಹೆಚ್ಚಿನ ಹಾನಿ ತಪ್ಪಿಸಿದ್ದಾರೆ.
ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ, ಪರಿಶೀಲನೆ
ಸ್ಥಳಕ್ಕೆ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿಯಿಂದ ಕಾರ್ಖಾನೆಯಲ್ಲಿದ್ದ ಯಂತ್ರೋಪಕರಣಗಳು, ಕಚ್ಚಾ ವಸ್ತುಗಳು ಮತ್ತು ತಯಾರಾದ ಸಾಮಗ್ರಿಗಳು ಸಂಪೂರ್ಣ ಹಾನಿಗೊಳಗಾಗಿವೆ. ಕೋಟ್ಯಂತರ ರೂಪಾಯಿ ನಷ್ಟವಾಗಿರುವುದು ಅಂದಾಜಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸದಿರುವುದು ಸೌಭಾಗ್ಯ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಠಾಣೆ ಸಿಬ್ಬಂದಿಯಿಂದ ಕಾರ್ಯಾಚರಣೆ ಮುಂದುವರಿದಿದೆ. ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ಠಾಣೆ ಸಿಬ್ಬಂದಿ SDRF ತಂಡದಿಂದ ಕಾರ್ಯಾಚರಣೆ ನಡೆದಿದ್ದು, ಹರಸಾಹಸಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತುಕೊಂಡಿರೋ ಶಂಕೆ ವ್ಯಕ್ತವಾಗಿದ್ದು, ಕಾರ್ಯಾಚರಣೆ ತ್ವರಿತಗೊಳಿಸಿದ್ದಾರೆ. ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿ ವ್ಯಾಪಿಸದಂತೆ ಕ್ರಮಕೈಗೊಳ್ಳಲಾಗಿದೆ.
ಪ್ರಮುಖ ಉದ್ಯಮ ಕೇಂದ್ರವಾಗಿರುವ ಜಿಗಣಿ!
ಜಿಗಣಿ ಕೈಗಾರಿಕಾ ಪ್ರದೇಶವು ಬೆಂಗಳೂರಿನ ಪ್ರಮುಖ ಉದ್ಯಮ ಕೇಂದ್ರವಾಗಿದ್ದು, ಹಲವು ಕಾರ್ಖಾನೆಗಳಿವೆ. ಇಂತಹ ಅವಘಡಗಳು ಸುರಕ್ಷತಾ ಕ್ರಮಗಳ ಮಹತ್ವವನ್ನು ಮತ್ತೊಮ್ಮೆ ನೆನಪಿಸುತ್ತವೆ. ಅಗ್ನಿಶಾಮಕ ಸಿಬ್ಬಂದಿಯ ತ್ವರಿತ ಕಾರ್ಯಾಚರಣೆಗೆ ಪ್ರಶಂಸೆ ವ್ಯಕ್ತವಾಗಿದೆ. ಮುಂದುವರಿದ ತನಿಖೆಯಿಂದ ಬೆಂಕಿಗೆ ನಿಖರ ಕಾರಣ ತಿಳಿದುಬರಲಿದೆ. ಈ ಅವಘಡದಿಂದ ಕೈಗಾರಿಕಾ ಪ್ರದೇಶದಲ್ಲಿ ಆತಂಕ ಮೂಡಿದ್ದು, ಸುರಕ್ಷತಾ ಕ್ರಮಗಳನ್ನು ಬಲಪಡಿಸುವಂತೆ ಒತ್ತಾಯ ಕೇಳಿಬಂದಿದೆ.
ಜೂಪಿಟರ್ ಟೆಕ್ನಾಲಜೀಸ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ: 3 ಅಂತಸ್ತಿನ ಇಡೀ ಫ್ಯಾಕ್ಟರಿ ಬೆಂಕಿಗಾಹುತಿ
