Ad image

ಮುಡಾ ಕೇಸ್‌ – ಸಿಎಂ ಸಿದ್ದರಾಮಯ್ಯಗೆ ಇಂದು ಬಿಗ್‌ ಡೇ

Team SanjeMugilu
1 Min Read

ಬೆಂಗಳೂರು: ಸಿಎಂ ಸಿದ್ದರಾಮಯ್ಯ  ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್‌ಚಿಟ್‌ಗೆ ನ್ಯಾಯಾಲಯ ಇಂದು (ಡಿ.18) ತೀರ್ಪು ನೀಡಲಿದೆ.

ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್‌ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದ್ರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ಅತೀ ದೊಡ್ಡ ಸಂಕಷ್ಟ ಎದುರಾಗಲಿದೆ. ಲೋಕಾಯುಕ್ತದಿಂದ ಇಂದು ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಅಂತಿಮ ವರದಿ ಸಲ್ಲಿಕೆ ಬಳಿಕ ಬಿ ರಿಪೋರ್ಟ್ ಆದೇಶ‌ ಹೊರಬೀಳಲಿದೆ.

ಏನಿದು ಪ್ರಕರಣ?
ಮುಖ್ಯಮಂತ್ರಿ ಸಿದ್ದರಾಮಯ್ಯ  ಪತ್ನಿಯವರು ಮೂಡಾದಿಂದ ಪಡೆದಿದ್ದ 14 ಸೈಟ್‌ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್‌ ಸಲ್ಲಿಸಿತ್ತು. ಬಿ-ರಿಪೋರ್ಟ್‌ನ್ನು ಪ್ರಶ್ನಿಸಿ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಖುದ್ದು ನ್ಯಾಯಾಲಯದಲ್ಲಿ ಸ್ನೇಹಮಯಿ ಕೃಷ್ಣ ಅವರೇ ವಾದಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಅಂತಿಮ ವರದಿ ಸಲ್ಲಿಸಲು 2 ತಿಂಗಳು ಗಡುವು ನೀಡಿ ತೀರ್ಪನ್ನು ಕಾಯ್ದಿರಿಸಿತ್ತು. ಇದಕ್ಕೂ ಮುನ್ನ ಲೋಕಾಯುಕ್ತ ಸಲ್ಲಿಸಿದ್ದ ಬಿ-ರಿಪೋರ್ಟ್ ಪ್ರಶ್ನಿಸಿ ಇಡಿ ಸಹ ತಕರಾರು ಅರ್ಜಿ ಸಲ್ಲಿಸಿತ್ತು.

Share This Article