ಸಿಎಂ ಕಿಚಾಯಿಸಿದ ಅಶೋಕ್
ಕಲಾಪದ ನಡುವೆ ಸಿಎಂ ಕಾಲೆಳೆದ ವಿಪಕ್ಷ ನಾಯಕ ಆರ್.ಅಶೋಕ್ . ಕಳೆದ 4 ದಿನಗಳಿಂದ ಬಳಲಿದ್ರಿ, ನಾವು ರಾಜಕೀಯ ನಿಶ್ಯಕ್ತಿ ಅನ್ಕೊಂಡಿದ್ವಿ. ನಿಮಗೆ ರಾಜಕೀಯ ಶಕ್ತಿ ಬಂದಿದೆಯಾ? ಅಂತ ಕಿಚಾಯಿಸಿದ್ರು. ಈ ವೇಳೆ ಪ್ರತಿಕ್ರಿಯಿಸಿದ ಸಿಎಂ, ನನಗೆ ರಾಜಕೀಯ ನಿಶ್ಯಕ್ತಿ ಇಲ್ವೇ ಇಲ್ಲ, ಅಂಥ ಅವಕಾಶ ಸೃಷ್ಟಿಯಾಗೋದಿಲ್ಲ. ರಾಜಕೀಯವನ್ನು ಅಷ್ಟೊಂದು ತಲೆ ಕೆಡಿಸಿಕೊಂಡು ಮಾಡೋ ಅಗತ್ಯವೂ ಇಲ್ಲ ಅಂತ ತಿರುಗೇಟು ನೀಡಿದ್ರು.
2.5 ವರ್ಷಕ್ಕೆ ಅಂತ ಹೇಳೇ ಇಲ್ಲ
ಇನ್ನೂ ಅಧಿವೇಶನದ ಕಡೇ ದಿನ ಸಿಎಂ ಸಿದ್ದರಾಮಯ್ಯ ಕುರ್ಚಿ ಕದನಕ್ಕೆ ಕ್ಲ್ಯಾರಿಟಿ ಕೊಟ್ಟಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತಾ ತೀರ್ಮಾನ ಆಗಿಲ್ಲ ಎನ್ನುವ ಮೂಲಕ ಫುಲ್ ಟರ್ಮ್ ಸಿಎಂ ಬ್ರಹ್ಮಾಸ್ತ್ರಾ ಪ್ರಯೋಗಿಸಿದ್ದಾರೆ.
ವಿಧಾನಸಭೆಯಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಉತ್ತರ ಕೊಡುವ ವೇಳೆ, ಬಿಜೆಪಿ ಸದಸ್ಯರ ಕಾಲೆಳೆಯುವ ಮಾತುಗಳನ್ನೇ ಮೆಟ್ಟಿಲುಗಳನ್ನಾಡಿ ಮಾಡಿಕೊಂಡ ಸಿಎಂ, ಪಕ್ಷದೊಳಗಿನ ವಿರೋಧಿಗಳಿಗೂ ಗುನ್ನಾ ಹೊಡೆದಿದ್ದಾರೆ. ಎರಡೂವರೆ ವರ್ಷ ಸಿಎಂ ಅಂತ ತೀರ್ಮಾನ ಆಗಿಲ್ಲ. ಶಾಸಕರು 5 ವರ್ಷಕ್ಕೆ ಸಿಎಂ ಆಯ್ಕೆ ಮಾಡಿದ್ದಾರೆ. ನಾನು ಐದು ವರ್ಷಕ್ಕೆ ಸಿಎಂ ಆಗಿ ಆಯ್ಕೆ ಆಗಿದ್ದೇನೆ ಅಂತ ವಿಪಕ್ಷ ನಾಯಕ ಅಶೋಕ್ಗೆ ತಿರುಗೇಟು ಕೊಟ್ಟಿದ್ದಾರೆ,
