Ad image

‘ದುರಂತದ ಸುದ್ದಿ ಕೇಳಿ ಎದೆ ನಡುಗಿತು’, ಭೀಕರ ಅಪಘಾತದ ಕುರಿತ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

Team SanjeMugilu
1 Min Read

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ  ಸಂಭವಿಸಿದೆ. ಈ ಘನಘೋರ ದುರಂತದಲ್ಲಿ 5 ಮಂದಿ ಸಜೀವ ದಹನವಾಗಿದ್ದು, ಒಟ್ಟಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಕಂಟೇನರ್​​ ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿಯಲ್ಲಿ ಭಸ್ಮಗೊಂಡಿದೆ. ಭೀಕರ ಅಪಘಾತಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ  ಅವರು, ತನಿಖೆಗೆ ಸೂಚನೆ ನೀಡಿದ್ದಾರೆ.
‘ದುರಂತದ ಸುದ್ದಿ ಕೇಳಿ ಎದೆ ನಡುಗಿತು’
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಅಪಘಾತದ ಸೂಕ್ತ ತನಿಖೆಗೆ ಆಗ್ರಹ
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆ ಹಚ್ಚಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್​​ನಲ್ಲಿ ಬರೆದಿದ್ದಾರೆ. ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ದುರಂತದ ಬಗ್ಗೆ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌
ಮೃತರ ಆತ್ಮಕ್ಕೆ ಶಾಂತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

Share This Article