ಈಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.
ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಡಿಕೆಶಿ ಸಂತಾಪ
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪೋಸ್ಟ್ ಮಾಡಿದ್ದಾರೆ.
