ಚಾಮರಾಜನಗರ: ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಎಎಸ್‌ಐ ಕೊನೆಯುಸಿರೆಳೆದಿದ್ದಾರೆ. ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದ ಮನೆಯಲ್ಲಿ ಕುಸಿದು ಬಿದ್ದು ಎಎಸ್‌ಐ ನಾಗನಾಯಕ ಮೃತಪಟ್ಟಿದ್ದಾರೆ.
ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ASI ಹೃದಯಾಘಾತದಿಂದ ಸಾವು
