ಕಾರವಾರ: ಯಲ್ಲಾಪುರದಲ್ಲಿ ಮದುವೆಗೆ ಒಪ್ಪದ ರಂಜಿತಾಳನ್ನ ಕತ್ತುಕೊಯ್ದು ಹತ್ಯೆ ಮಾಡಿ ತಾನೂ ಆತ್ಮಹತ್ಯೆಮಾಡಿಕೊಂಡ ರಫೀಕ್ ಪ್ರಕರಣ ಮಾಸುವ ಬೆನ್ನಲ್ಲೇ ಅಂಕೋಲದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಡನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡವನು ಪವನ್ ಭಟ್ (24) ಎಂಬ ಯುವಕನಾಗಿದ್ದಾನೆ.
ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದನು ಎನ್ನಲಾಗಿದೆ. ಈ ಸಂಬಂಧವನ್ನ ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ನಿರಾಕರಣೆಯಿಂದ ಮನನೊಂದ ಪವನ್ ಭಟ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
