Ad image

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌- 8 ಮಂದಿ ಅರೆಸ್ಟ್‌

Team SanjeMugilu
1 Min Read

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ  ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಕರು , ವಿದ್ಯಾರ್ಥಿಗಳನ್ನು ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಜನವರಿ 9 ರಂದು ಹಿಂದಿ ಪರೀಕ್ಷೆ ಇತ್ತು. ಆದರೆ ಜನವರಿ 8 ರಂದು ನಿರಂಜನ್ ಶೆಟ್ಟಿ ಹೆಸರಿನ ಯೂಟ್ಯೂಬ್‌ ಚಾನೆಲ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಪದವಿ ಪೂರ್ವ ಇಲಾಖೆಯ ಜಂಟಿ ನಿರ್ದೇಶಕ ರಾಜು ಅವರು ನೀರಿದ ದೂರಿನ ಹಿನ್ನೆಲೆಯಲ್ಲಿ ಉತ್ತರ ವಿಭಾಗದ ಸೈಬರ್ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ತನಿಖೆಗೆ ಇಳಿದ ಪೊಲೀಸರು ಹೆಡ್ ಮಾಸ್ಟರ್‌ಗಳು, ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳು ಸೇರಿ 8 ಮಂದಿಯನ್ನು ಬಂಧಿಸಿದ್ದಾರೆ. ತುಮಕೂರು, ರಾಮನಗರ, ಕಲಬುರಗಿ ಜಿಲ್ಲೆಯ ಹೆಡ್ ಮಾಸ್ಟರ್ ಹಾಗೂ ಶಿಕ್ಷಕರ ಬಂಧನವಾಗಿದೆ.

ಈಗ ಪೊಲೀಸರು ಪ್ರಶ್ನೆಪತ್ರಿಕೆಯನ್ನು ವೈರಲ್ ಮಾಡಿದವರ ವಾಟ್ಸಪ್‌, ಇನ್‌ಸ್ಟಾ, ಟೆಲಿಗ್ರಾಂ ಖಾತೆಯ ಜೊತೆ ಮೊಬೈಲ್ ಪರಿಶೀಲನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ.

ಬಂಧಿತರು ಯಾರು?
ಗಿರೀಶ್ ವಿ.ಡಿ – ಮುಖ್ಯೋಪಾಧ್ಯಾಯ(ತುಮಕೂರು)
ಅಮ್ಜದ್ ಖಾನ್ – ಸಹ ಶಿಕ್ಷಕ(ರಾಮನಗರ)
ಶಾಹಿದಾ ಬೇಗಂ – ಮುಖ್ಯ ಶಿಕ್ಷಕಿ(ಕಲಬುರಗಿ)
ಫಾಹ್ಮಿದಾ – ಸಹ ಶಿಕ್ಷಕಿ(ಕಲಬುರಗಿ)
ಮೊಹಮ್ಮದ್ ಸಿರಾಜುದ್ದೀನ್ – ಶಿಕ್ಷಕ(ಕಲಬುರಗಿ)
ಫರ್ಜಾನಾ ಬೇಗಂ – ಶಿಕ್ಷಕಿ(ಕಲಬುರಗಿ)

Share This Article