Ad image

ಬೆಂಗಳೂರಿನ ಪಿಜಿಗಳಿಗೆ ಜಿಬಿಎ ಶಾಕ್! 500ಕ್ಕೂ ಹೆಚ್ಚು ಪಿಜಿಗಳಿಗೆ ನೋಟಿಸ್

Team SanjeMugilu
1 Min Read

ಬೆಂಗಳೂರು: ನಗರದಲ್ಲಿ ವಿವಿಧ ರಾಜ್ಯಗಳಿಂದ ಉದ್ಯೋಗ, ಶಿಕ್ಷಣ ಸೇರಿದಂತೆ ಹಲವು ಕಾರಣಗಳಿಂದ ವಾಸವಾಗಿರುವ ಜನರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೇಯಿಂಗ್ ಗೆಸ್ಟ್  ವಸತಿಗೃಹಗಳ ಸಂಖ್ಯೆಯೂ ಅಪಾರವಾಗಿ ಹೆಚ್ಚಾಗಿದೆ. ಆದರೆ ಅನೇಕ ಪಿಜಿಗಳು ಮೂಲಭೂತ ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಅಸುರಕ್ಷಿತ ಪಿಜಿಗಳ ವಿರುದ್ಧ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕಟ್ಟುನಿಟ್ಟಿನ ಕಾರ್ಯಾಚರಣೆಗೆ ಮುಂದಾಗಿದ್ದಾರೆ.

ಈಗಾಗಲೇ 8 ಪಿಜಿಗಳಿಗೆ ಬೀಗ!
ಜನವರಿ ತಿಂಗಳಲ್ಲೇ ಶಾಂತಿನಗರ, ಸಿ.ವಿ.ರಾಮನ್‌ನಗರ, ಗಾಂಧಿನಗರ, ಶಿವಾಜಿನಗರ, ಚಾಮರಾಜಪೇಟೆ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ತಪಾಸಣೆ ನಡೆಸಿದ ಆರೋಗ್ಯಾಧಿಕಾರಿಗಳು 574 ಪಿಜಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಡುಗೆ ಕೋಣೆ ಶುಚಿತ್ವ, ಶುದ್ಧ ಕುಡಿಯುವ ನೀರು, ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಇದ್ದ 8 ಪಿಜಿಗಳಿಗೆ ಬೀಗ ಹಾಕಲಾಗಿದ್ದು, ಇತರೆ ನಿಯಮ ಉಲ್ಲಂಘನೆಗಳಿಗೆ ಒಟ್ಟೂ 3.09 ಲಕ್ಷ ರೂ. ದಂಡ ವಿಧಿಸಲಾಗಿದೆ.

ಪಿಜಿ ಮಾಲೀಕರಿಗೆ ಅಧಿಕಾರಿಗಖ ಖಡಕ್ ವಾರ್ನಿಂಗ್
ಪಿಜಿ ಮಾಲೀಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಮಾತನಾಡಿ, ಏಕಾಏಕಿ ನಡೆಯುತ್ತಿರುವ ಕಾರ್ಯಾಚರಣೆಯಿಂದ ಮಾಲೀಕರು ಕಳವಳಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇತ್ತ ವಿಲ್ಸನ್ ಗಾರ್ಡನ್‌ನ ಪಿಜಿ ಮಾಲೀಕ ಶರಣೇಶ್ ಪ್ರತಿಕ್ರಿಯಿಸಿ, ನಿಯಮ ಪಾಲನೆ ಜೊತೆಗೆ ಅಧಿಕಾರಿಗಳಿಗೆ ಸಹಕರಿಸುವುದು ನಮ್ಮ ಜವಾಬ್ದಾರಿ ಎಂದು ಹೇಳಿದ್ದಾರೆ. ಪರಿಶೀಲನೆಗೆ ಒಳಪಟ್ಟ ಎಲ್ಲಾ ಪಿಜಿಗಳಿಗೆ ಎಚ್ಚರಿಕೆ ನೀಡಲಾಗಿದ್ದು, ನ್ಯೂನ್ಯತೆ ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಪಿಜಿಗಳಿಗೆ ಬೀಗ ಬೀಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

Share This Article