ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 100ಕ್ಕೂ ಅಧಿಕ ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ.
ಇಂದು ಬೆಳಗ್ಗೆ 5:30 ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ , ಹುಳಿಮಾವು , ಸರ್ಜಾಪುರ ಹಾಗು ಡೈರಿ ಸರ್ಕಲ್‌ನಿಂದ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ಮಹಿಳಾ ಅಧಿಕಾರಿಯ ಬೆಡ್‌ರೂಮ್ ವಿಡಿಯೋ ಸೆರೆ ಹಿಡಿದು 50 ಲಕ್ಷಕ್ಕೆ ಬ್ಲ್ಯಾಕ್‌ಮೇಲ್ – ನಕಲಿ ಪತ್ರಕರ್ತರು ಅರೆಸ್ಟ್
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶೆಡ್ ಗಳು ಹಾಗು ಸ್ಕ್ರಾಪ್ ವಸ್ತುಗಳು ಬೆಂಕಿಗಾಹುತಿಯಾಗಿದೆ. ಹೈ ಟೆನ್ಷನ್ ವಯರ್ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
