ಬೆಂಗಳೂರು : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬೈರತಿ ಬಸವರಾಜ್ಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದ್ದು, ಬಿಜೆಪಿ ಶಾಸಕನಿಗೆ ಬಿಗ್ ಶಾಕ್ ಕೊಟ್ಟಿದೆ.
ಡಿಸೆಂಬರ್ 26ರಂದು ಹೈಕೋರ್ಟ್ ರಜಾಕಾಲಪೀಠ ಬೈರತಿ ಬಸವರಾಜ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಬಳಿಕ ಹೈಕೋರ್ಟ್ ರಜಾಕಾಲಪೀಠದ ಆದೇಶ ಪ್ರಶ್ನಿಸಿ ಸಿಐಟಿ ಮೇಲ್ಮನವಿ ಸಲ್ಲಿಸಿತ್ತು. ಇಂದು ಈ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಪೀಠ ಕೈಗೆತ್ತಿಕೊಂಡಿದ್ದು, ಬೈರತಿ ಬಸವರಾಜ್ ನಿರೀಕ್ಷಣಾ ಜಾಮೀನು ವಜಾಗೊಳಿಸಿ ಆದೇಶ ನೀಡಿದೆ.
ಬೈರತಿ ಬಸವರಾಜ್ಗೆ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನ ಭೀತಿ
