ಬೆಂಗಳೂರು: ಬೂದಿ ಮುಚ್ಚಿದ ಕೆಂಡದಂತಿದ್ದ ನಾಯಕತ್ವ ಬದಲಾವಣೆ ವಿಚಾರ ಇದೀಗ ಮತ್ತೆ ಕಾಂಗ್ರೆಸ್ ನಲ್ಲಿ ಕಿಚ್ಚು ಹಚ್ಚಿದ್ದು, ಕೋಲಾಹಲವನ್ನೇ ಸೃಷ್ಟಿಸಿದೆ. ಇದೀಗ ಕುರ್ಚಿ ಕಾದಾಟ ದೆಹಲಿಗೆ ಶಿಫ್ಟ್ ಆಗಿದೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೆಂದು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ರಾಹುಲ್ ಜೊತೆ ಚರ್ಚೆ ಶತಪ್ರಯತ್ನ ಮಾಡ್ತಿದ್ದಾರೆ. ಇತ್ತ ರಾಜ್ಯದಲ್ಲಿ ಮತ್ತೆ ಪವರ್ ಶೇರಿಂಗ್ ಚರ್ಚೆ ಜೋರಾಗಿದೆ. ಇದೀಗ ಡಿಕೆಶಿ ಸಹೋದರ ಡಿಕೆ ಸುರೇಶ್ ಅವರು ಮತ್ತೆ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಟ್ಟ ಮಾತು ನೆನಪಿಸುತ್ತಿದ್ದಾರೆ.
ನಿಧಾನವಾದ್ರೂ ಸಿಎಂ ಕೊಟ್ಟ ಮಾತು ಉಳಿಸಿಕೊಳ್ತಾರೆ
ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಕೆ ಸುರೇಶ್ ಅವ್ರು ನನಗೆ ಈಗಲೂ ಭರವಸೆ ಇದೆ. ನಿಧಾನವಾದ್ರೂ ಪರವಾಗಿಲ್ಲ, ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ತಾರೆ ಎಂಬ ವಿಶ್ವಾಸವಿದೆ ಎನ್ನುತ್ತಾ ಸಿದ್ದರಾಮಯ್ಯ ಅವರಿಗೆ ಮತ್ತೆ ಕೊಟ್ಟ ಮಾತಿನ ಬಗ್ಗೆ ಡಿಕೆ ಸುರೇಶ್ ನೆನಪು ಮಾಡಿದ್ದಾರೆ.
‘ನಾವು ಯಾರನ್ನು ವಿದೇಶಕ್ಕೆ ಕಳಿಸ್ತಿಲ್ಲ’
ಸಿಎಂ ಸಿದ್ದರಾಮಯ್ಯ ಅವರು ಶಾಸಕರನ್ನ ವಿದೇಶಿ ಪ್ರವಾಸಕ್ಕೆ ಕಳುಹಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಮಾಜಿ ಸಂಸದ ಡಿಕೆ ಸುರೇಶ್ ಅವ್ರು ವಿದೇಶ ಪ್ರವಾಸ ಯಾರು ಹೋಗ್ತಿದ್ದಾರೆ ಅವರನ್ನೇ ಕೇಳಬೇಕು ಎಂದಿದ್ದಾರೆ.
ವಿದೇಶ ಪ್ರವಾಸಕ್ಕೂ ಡಿಕೆಶಿಗೂ ಸಂಬಂಧವಿಲ್ಲ
ವಿದೇಶ ಪ್ರವಾಸವನ್ನ ಡಿಸಿಎಂ ಡಿಕೆ ಶಿವಕುಮಾರ್ ಆಯೋಜನೆ ಮಾಡಿದ್ದಲ್ಲ. ವಿದೇಶ ಪ್ರವಾಸಕ್ಕೂ ಡಿಕೆಶಿಗೂ ಸಂಬಂಧವಿಲ್ಲ. ಅದನ್ನು ಮಾತ್ರ ಸ್ಪಷ್ಟವಾಗಿ ಹೇಳಬಲ್ಲೆ. ವಿದೇಶ ಪ್ರವಾಸದ ಆಯೋಜಕರನ್ನೇ ಕೇಳಿ ಎಂದು ಡಿಕೆ ಸುರೇಶ್ ಹೇಳಿದ್ದಾರೆ.
ಪವರ್ ಶೇರಿಂಗ್ ಬಗ್ಗೆ ಡಿಕೆ ಸುರೇಶ್ ಶಾಕಿಂಗ್ ಕಮೆಂಟ್
