ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆಬ್ರವರಿ 15ರಂದು ಮಹಾಶಿವರಾತ್ರಿ ಹಬ್ಬದ ಹಿನ್ನೆಲೆ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನ ನಿಷೇಧಿಸಿದೆ. ಈ ಸಂಬಂಧ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಫೆಬ್ರವರಿ 15ರಂದು ಮಾಂಸ ಮಾರಾಟ ನಿಷಿದ್ಧ
ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬವಿರುವ ಕಾರಣ ಮಾಂಸ ಮಾರಾಟಕ್ಕೆ ಬ್ರೇಕ್ ಬಿದ್ದಿದೆ. ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದಾರೆ. ಹಬ್ಬದ ದಿನದಂದು ಪ್ರಾಣಿ ವಧೆ ಹಾಗೂ ಮಾಂಸ ಉತ್ಪನ್ನಗಳನ್ನು ಮಾರಾಟ ಮಾಡುವುದನ್ನ ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ.
ನಾಗರಿಕರು ಆದೇಶವನ್ನ ಪಾಲಿಸಬೇಕು
ಫೆಬ್ರವರಿ 15 ರಂದು ಮಹಾಶಿವರಾತ್ರಿ ನಿಮಿತ್ಯ ಜಿಬಿಎ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ / ಮಾಂಸಾಹಾರಿ ಅಂಗಡಿಗಳನ್ನು ಬಂದು ಮಾಡುವುದು ಕಡ್ಡಾಯವಾಗಿದೆ. ನಾಗರಿಕರು ಆದೇಶವನ್ನು ಪಾಲಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಮಾಂಸ ಮಾರಾಟಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಈ ಒಂದು ದಿನ ಮಾಂಸ ಮಾರಾಟ, ಪ್ರಾಣಿ ವಧೆ ನಿಷೇಧ; ಜಿಬಿಎ ಆದೇಶ
