Ad image

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Team SanjeMugilu
1 Min Read
ಬೆಂಗಳೂರು: ಸಿಎಂ ವಿರುದ್ಧ ಬಿಜೆಪಿ ಶಾಸಕ ಸುನಿಲ್ ಕುಮಾರ್  ಬಾಂಬ್ ಹಾಕಿದ್ದಾರೆ. ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾಯಿಸುವಂತೆ ಸಿಎಂ ಬರೆದಿದ್ದಾರೆ ಎನ್ನಲಾದ ಪತ್ರವನ್ನ ಸುನಿಲ್ ಕುಮಾರ್ ಬಿಡುಗಡೆ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಸಿಎಂ ಶಿಫಾರಸು ಪತ್ರ ಸಹಿತ ಸುನಿಲ್ ಕುಮಾರ್ ಆರೋಪ ಮಾಡಿದ್ದು, ಸಿಎಂ ಸಿದ್ದರಾಮಯ್ಯ ಅವರ ಹಳಿ ತಪ್ಪಿದ ಆಡಳಿತದ ಕ್ಲಾಸಿಕ್ ಉದಾಹರಣೆಯಾಗಿದೆ. ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯನ್ನು ಮೈಸೂರು ಗ್ರಾಮಾಂತರ ಜಿಲ್ಲೆ ಅಬಕಾರಿ ಡಿಸಿಯಾಗಿ ನಿಯೋಜಿಸುವಂತೆ ಖುದ್ದು ಮುಖ್ಯಮಂತ್ರಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ ಅಂತಾ ಆರೋಪಿಸಿದ್ದಾರೆ.

ಇದು ಅಬಕಾರಿ ಹಾಗೂ ಆರೋಗ್ಯ ಇಲಾಖೆಯ ವೃಂದ ನಿಯಮಕ್ಕೆ ಸಂಪೂರ್ಣ ವಿರುದ್ಧವಾಗಿದೆ. ಸಿದ್ದರಾಮಯ್ಯನವರೂ ‘ಇಂದ್ರೀಯ’ ವಶವಾಗಿ ಆಡಳಿತದ ಹದ ಕಳೆದುಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ ಅಂತಾ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ ನಡೆದಿರುವ 6,000 ಕೋಟಿ ರೂ.ಗೂ ಅಧಿಕ ಮೊತ್ತದ ಅವ್ಯವಹಾರ ಹಾಗೂ ಕಿಕ್ ಬ್ಯಾಕ್ ದಂಧೆಯ ಹಿಂದೆ ಇಂಥ ಅವೈಜ್ಞಾನಿಕ ಹಾಗೂ ನಿಯಮ ಬಾಹಿರ ವರ್ಗಾವಣೆಯ ಸೂಚನೆಗಳು ಕೆಲಸ ಮಾಡಿರುವ ಸಾಧ್ಯತೆಗಳು ದಟ್ಟವಾಗಿದೆ. ಮುಖ್ಯಮಂತ್ರಿಗಳೇ ಆಯಕಟ್ಟಿನ ಇಲಾಖೆಗೆ ಮಾತ್ರ ನೀವು ಈ ರೀತಿ ಎರವಲು ಸೇವೆಯ ಶಿಫಾರಸು ಮಾಡುತ್ತೀರಾ? ಅಥವಾ ನಿಮ್ಮಿಂದ ಮಾಡಿಸುತ್ತಾರಾ ಎಂದು ಸುನೀಲ್ ಪ್ರಶ್ನಿಸಿದ್ದಾರೆ.

Share This Article