Ad image

ಎಐ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ – ಯುವ ಕಾಂಗ್ರೆಸ್ ಮುಖ್ಯಸ್ಥ ಬಂಧನ

Team SanjeMugilu
1 Min Read

ನವದೆಹಲಿ: ಭಾರತ ಎಐ ಇಂಪ್ಯಾಕ್ಟ್‌ ಶೃಂಗಸಭೆಯಲ್ಲಿ ಶರ್ಟ್‌ ಬಿಚ್ಚಿ ಪ್ರತಿಭಟನೆ ಮಾಡಿದ ಪ್ರಕರಣದಲ್ಲಿ ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರನ್ನು ಬಂಧಿಸಲಾಗಿದೆ.

ಪ್ರಕರಣ ಸಂಬಂಧ ಹಲವಾರು ಸುತ್ತಿನ ವಿಚಾರಣೆಯ ನಂತರ ಬಂಧಿಸಲಾಗಿದೆ. ತಿಲಕ್ ಮಾರ್ಗ ಪೊಲೀಸ್ ಠಾಣೆ ಪೊಲೀಸರಿಂದ ಬಂಧನ ಮಾಡಲಾಗಿದೆ. ಪೊಲೀಸ್ ಠಾಣೆ ಹೊರಗೆ ಭಾರಿ ಭದ್ರತೆ ಕಲ್ಪಿಸಲಾಗಿದೆ.

ಎಐ ಸಭೆಯಲ್ಲಿ ಶರ್ಟ್‌ಲೆಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ತಿಲಕ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಸುಮಾರು 15 ಗಂಟೆಗಳ ವಿಚಾರಣೆಯ ನಂತರ ಚಿಬ್ ಅವರನ್ನು ಬಂಧಿಸಲಾಗಿದೆ. ಚಿಬ್ ವಿಚಾರಣೆಯ ಸಮಯದಲ್ಲಿ ಸಹಕರಿಸಲಿಲ್ಲ. ತನಿಖಾಧಿಕಾರಿಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸಿದರು. ಅವರ ವಿರುದ್ಧ ಸಾಕಷ್ಟು ಪುರಾವೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಬ್‌ನನ್ನು ಈಗ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈ ಪ್ರಕರಣದಲ್ಲಿ ಇದು ಎಂಟನೇ ಬಂಧನವಾಗಿದೆ.

Share This Article