Ad image

ಫೆ.26ಕ್ಕೆ ಭಾರತಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ

Team SanjeMugilu
1 Min Read
ನವದೆಹಲಿ: ಫೆ.26ಕ್ಕೆ ಕೆನಡಾ  ಪ್ರಧಾನಿ ಮಾರ್ಕ್ ಕಾರ್ನಿ  ಭಾರತಕ್ಕೆ ಆಗಮಿಸಲಿದ್ದಾರೆ.
ಫೆ.26ರಿಂದ ಮಾ.7ರವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್‌ಗೆ ಪ್ರಯಾಣ ಬೆಳೆಸಲಿರುವ ಮಾರ್ಕ್ ಕಾರ್ನಿ ಅವರು ಮೊದಲು ಮುಂಬೈಗೆ ಭೇಟಿ ನೀಡಲಿದ್ದಾರೆ. ನಂತರ ದೆಹಲಿಗೆ ಭೇಟಿ ನೀಡಿ, ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ.

ಭೇಟಿ ವೇಳೆ, ನಾಯಕರು ಕೆನಡಾ-ಭಾರತ ಸಂಬಂಧವನ್ನು ಉನ್ನತೀಕರಿಸುವ ಮತ್ತು ವಿಸ್ತರಿಸುವತ್ತ ಗಮನಹರಿಸಲಿದ್ದಾರೆ. ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆ, ಪ್ರತಿಭೆ ಮತ್ತು ಸಂಸ್ಕೃತಿ ಮತ್ತು ರಕ್ಷಣೆಯಲ್ಲಿ ಮಹತ್ವಾಕಾಂಕ್ಷೆಯ ಹೊಸ ಪಾಲುದಾರಿಕೆ ಮಾತುಕತೆ ನಡೆಸಲಿದ್ದಾರೆ. ಕೆನಡಾದಲ್ಲಿ ಹೂಡಿಕೆ ಅವಕಾಶಗಳನ್ನು ಗುರುತಿಸಲು ಮತ್ತು ಎರಡೂ ರಾಷ್ಟ್ರಗಳಲ್ಲಿನ ವ್ಯವಹಾರಗಳ ನಡುವೆ ಹೊಸ ಪಾಲುದಾರಿಕೆಗಳನ್ನು ಸೃಷ್ಟಿಸುವ ಬಗ್ಗೆ ಮಾತನಾಡಲಿದ್ದಾರೆ.

ಜಸ್ಟಿನ್ ಟ್ರುಡೊ ಬಳಿಕ ಅಧಿಕಾರ ವಹಿಸಿಕೊಂಡ ನಂತರ ಕಾರ್ನಿ ಅವರು ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ.

Share This Article