ಚೆನ್ನೈ: ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದಿಂದ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಸೇರಿದಂತೆ ದೇಶದ ಅನೇಕ ಭಾಗಗಳಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್ ಮತ್ತು ಗೃಹ ಬಳಕೆಯ ಎಲ್ಪಿಜಿ ಸರಬರಾಜಿನ ಮೇಲೆ ಪರಿಣಾಮ ಬೀರಿದ್ದು, ಗ್ಯಾಸ್ ಸಿಲಿಂಡರ್ ಅಭಾವ ತಲೆದೋರಿದೆ. ತಮಿಳುನಾಡಲ್ಲಿ ಗ್ಯಾಸ್ ಅಭಾವದಿಂದ ರೆಸ್ಟೋರೆಂಟ್ಗಳು ಬಂದ್ ಮಾಡೋ ಪರಿಸ್ಥಿತಿ ಬಂದಿದೆ ಎಂದು ಮಾಲೀಕರು ಅಳಲು ತೋಡಿಕೊಂಡಿದ್ದಾರೆ.
ಈ ಬಗ್ಗೆ ಚೆನ್ನೈ ಹೋಟೆಲ್ ಅಸೋಸಿಯೇಷನ್ ತಮಿಳುನಾಡು ಸಿಎಂಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಸಿಲಿಂಡರ್ ಸಿಗದೆ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ವಿತರಕರು ಸಿಲಿಂಡರ್ ಪೂರೈಕೆ ಸಂಪೂರ್ಣ ಸ್ಥಗಿತ ಮಾಡಿದ್ದಾರೆ. ನೋ ಸ್ಟಾಕ್ ಎಂದು ಹೇಳುತ್ತಿದ್ದಾರೆ.ಬಹುತೇಕ ರೆಸ್ಟೋರೆಂಟ್ ಬಂದ್ ಮಾಡುವ ಪರಿಸ್ಥಿತಿ ಬಂದಿದೆ ಎಂದು ಪತ್ರದಲ್ಲಿ ಅಳಲು ತೋಡಿಕೊಂಡಿದ್ದಾರೆ. ಸಮರ್ಪಕ ಕಮರ್ಷಿಯಲ್ ಸಿಲಿಂಡರ್ ಪೂರೈಕೆಗೆ ಕ್ರಮವಹಿಸಿ. ಸರ್ಕಾರ ಕೂಡಲೇ ಸಮಸ್ಯೆ ಈಡೇರಿಸಬೇಕು ಎಂದು ಚೆನ್ನೈ ಹೋಟೆಲ್ ಅಸೋಸಿಯೇಷನ್ ಸರ್ಕಾರಕ್ಕೆ ಮನವಿ ಮಾಡಿದೆ.
ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್ಗಳನ್ನು ಬಂದ್ ಮಾಡೋ ಪರಿಸ್ಥಿತಿ
