Ad image

ತುಂಗಾಭದ್ರ ನದಿಗೆ ಹಾರಿ ಅತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳು – ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣೆ

Team SanjeMugilu
0 Min Read

ದಾವಣಗೆರೆ: ತುಂಗಾಭದ್ರ ನದಿಗೆ ಹಾರಿ ಪ್ರೇಮಿಗಳು  ಅತ್ಮಹತ್ಯೆಗೆ ಯತ್ನಿಸಿದ ಘಟನೆ ಹೊನ್ನಾಳಿ ಪಟ್ಟಣದಲ್ಲಿ ನಡೆದಿದೆ.

ತುಂಗಾಭದ್ರ ಬ್ರಿಡ್ಜ್ ಮೇಲಿಂದ ದಾವಣಗೆರೆ ಮೂಲದ ಪ್ರೇಮಿಗಳು ನದಿಗೆ ಜಿಗಿದಿದ್ದಾರೆ. ಇದನ್ನು ಕಂಡ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನದಿಯಲ್ಲಿ ನೀರಿನ ಮಟ್ಟ ಕಡಿಮೆ ಇದ್ದಿದ್ದರಿಂದ ಜೀವಕ್ಕೆ ಹಾನಿಯಾಗಿಲ್ಲ. ಮನೆಯಲ್ಲಿ ಇಬ್ಬರ ಮದುವೆಗೆ ಒಪ್ಪಿಗೆ ನೀಡದ ಹಿನ್ನಲೆ ಅತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಕೆಲ ದಿನಗಳ ಹಿಂದೆಯೇ ಇಬ್ಬರು ಮನೆ ತೊರೆದಿದ್ದರು ಎಂದು ತಿಳಿದು ಬಂದಿದೆ.

Share This Article