ಬೆಂಗಳೂರು: ನಗರದ ಕೆಆರ್ ಪುರಂ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳ ವಿರುದ್ಧ ಜಂಟಿ ಆಯುಕ್ತೆ ಡಾ. ಸುಧಾ ಅವರು ಸಮರ ಸಾರಿದ್ದು, ಅಧಿಕಾರಿಗಳೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ನೂರಾರು ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಗಿದೆ.
ಕೆಆರ್ ಪುರಂ ಪ್ರದೇಶದಲ್ಲಿ ಸಾರ್ವಜನಿಕ ರಸ್ತೆ, ವಿದ್ಯುತ್ ಕಂಬಗಳು, ಪಾದಚಾರಿ ಮಾರ್ಗಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಿಯಮ ಬಾಹೀರವಾಗಿ ಫ್ಲೆಕ್ಸ್‌ಗಳನ್ನು ಅಳವಡಿಸಲಾಗುತ್ತಿದೆ ಎಂಬ ದೂರುಗಳು ಹೆಚ್ಚಾಗಿದ್ದವು. ಇವುಗಳಿಂದ ನಗರದ ಸೌಂದರ್ಯ ಹಾನಿಯಾಗುವುದಲ್ಲದೆ, ಸಂಚಾರಕ್ಕೂ ಅಡ್ಡಿಯಾಗುತ್ತಿತ್ತು.
ಈ ಹಿನ್ನೆಲೆಯಲ್ಲಿ ಜಂಟಿ ಆಯುಕ್ತೆ ಡಾ.ಸುಧಾ ಅವರ ನೇತೃತ್ವದಲ್ಲಿ ವಿಶೇಷ ದಾಳಿ ನಡೆಸಿ, ಅನುಮತಿ ಪಡೆಯದೆ ಅಳವಡಿಸಿದ್ದ ಅನಧಿಕೃತ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಯಿತು. ಈ ಕಾರ್ಯಾಚರಣೆಯಲ್ಲಿ ಜಿಬಿಎ ಸಿಬ್ಬಂದಿ, ಪೊಲೀಸ್ ಇಲಾಖೆ ಸಹಕರಿಸಿದ್ದು, ನಗರದಲ್ಲಿ ಶಿಸ್ತು ಕಾಪಾಡಲು ಕ್ರ
ಮ ಕೈಗೊಳ್ಳಲಾಗಿದೆ.
ಡಾ.ಸುಧಾ ಅವರು ಈ ಸಂದರ್ಭದಲ್ಲಿ ಮಾತನಾಡಿ, “ಅನಧಿಕೃತ ಫ್ಲೆಕ್ಸ್‌ಗಳಿಗೆ ನಗರದಲ್ಲಿ ಅವಕಾಶ ಇಲ್ಲ. ನಿಯಮ ಪಾಲನೆ ಮಾಡದವರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಲಾಗುವುದು. ನಗರದ ಸೌಂದರ್ಯ ಮತ್ತು ಸಾರ್ವಜನಿಕ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆ” ಎಂದು ಎಚ್ಚರಿಕೆ ನೀಡಿದರು.
ಅಧಿಕಾರಿಗಳು ತಿಳಿಸಿದಂತೆ, ಮುಂದಿನ ದಿನಗಳಲ್ಲಿ ಫ್ಲೆಕ್ಸ್ ಅಳವಡಿಸಲು ಸಂಬಂಧಪಟ್ಟ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತದೆ. ಅನಧಿಕೃತವಾಗಿ ಫ್ಲೆಕ್ಸ್ ಅಳವಡಿಸಿದರೆ ದಂಡ ವಿಧಿಸುವ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.
ಸ್ಥಳೀಯರು ಈ ಕ್ರಮವನ್ನು ಸ್ವಾಗತಿಸಿ, “ಫ್ಲೆಕ್ಸ್‌ಗಳಿಂದ ನಗರದಲ್ಲಿ ಅಶಿಸ್ತು ಮತ್ತು ಅಪಾಯ ಹೆಚ್ಚಾಗುತ್ತಿತ್ತು. ಇಂತಹ ಕ್ರಮಗಳು ಮುಂದುವರಿದರೆ ನಗರ ಸ್ವಚ್ಛ ಮತ್ತು ಸುಂದರವಾಗಲಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.
ನಗರದಲ್ಲಿ ಹೆಚ್ಚುತ್ತಿರುವ ಅನಧಿಕೃತ ಜಾಹೀರಾತು ಮತ್ತು ಫ್ಲೆಕ್ಸ್ ಸಮಸ್ಯೆಯನ್ನು ತಡೆಯಲು ಜಿಬಿಎ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.
