Ad image

ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Team SanjeMugilu
1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಬಸ್ಸಾಪುರ ಇಜೆ ಗ್ರಾಮದ ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ದೇವೇಂದ್ರಪ್ಪ ಸ್ವಾಮಿ (58) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ದೇವೇಂದ್ರಪ್ಪ ಸ್ವಾಮಿ ಸರ್ಕಾರಿ ಸೇವೆಯಲ್ಲಿದ್ದುಕೊಂಡೇ ಮಠವನ್ನ ಕಟ್ಟಿದ್ದರು. ಮುಳ್ಳೂರು (ಇಜೆ) ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲುತ್ತಿದ್ದ ದೇವೇಂದ್ರಪ್ಪ ಜೀವನದಲ್ಲಿ ವೈರಾಗ್ಯ ಮೂಡಿ ಮಠಕಟ್ಟಿಕೊಂಡಿದ್ದರು. ಶಾಲಾ ಅವಧಿ ಬಳಿಕ ಸಂಜೆ ಮಠದಲ್ಲಿ ಧಾರ್ಮಿಕ ಪ್ರವಚನ ಮಾಡುತ್ತಿದ್ದರು.

ಸ್ವಾಮೀಜಿ ಮೂಲತಃ ಗದಗದ ಗಜೇಂದ್ರಗಡದ ಗುಳಗುಳಿ ಗ್ರಾಮದವರು. ಕಳೆದ 20 ವರ್ಷದಿಂದ ಸಿಂಧನೂರು ತಾಲೂಕಿನಲ್ಲಿ ಶಿಕ್ಷಕನಾಗಿ ಸೇವೆಸಲ್ಲಿಸುತ್ತಿದ್ದರು. ಕುಟುಂಬದಿಂದ ದೂರ ಉಳಿದಿದ್ದ ದೇವೇಂದ್ರಪ್ಪ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರ ಭಕ್ತರು, ಗ್ರಾಮಸ್ಥರು ಖಿನ್ನತೆ ಕಾರಣ ಎನ್ನುತ್ತಿದ್ದಾರೆ. ಮಠದ ಭೋಜನಾ ಕೋಣೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತುರುವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article