Ad image

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

Team SanjeMugilu
1 Min Read
ಬೆಂಗಳೂರು: 11 ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಬೆಂಗಳೂರು ಕರಗ ಉತ್ಸವಕ್ಕೆ ಇಂದು (ಮಾ.21) ಚಾಲನೆ ಸಿಗಲಿದೆ.
ಇಂದು ಸಂಜೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ಧ್ವಜಾರೋಹಣ ಮೂಲಕ ಉತ್ಸವಕ್ಕೆ ಅಧಿಕೃತ ಚಾಲನೆ ಸಿಗಲಿದೆ.

16ನೇ ಬಾರಿಗೆ ಕರಗ ಹೊರಲಿದ್ದಾರೆ ಜ್ಞಾನೇಂದ್ರ ಸ್ವಾಮಿ
ಏಪ್ರಿಲ್ 1ರಂದು ನಡೆಯಲಿರುವ ಶಕ್ತ್ಯೋತ್ಸವದಲ್ಲಿ ಎ. ಜ್ಞಾನೇಂದ್ರ ಸ್ವಾಮಿ ಕರಗ ಹೊರಲಿದ್ದಾರೆ. ಕಳೆದ ವರ್ಷ 15ನೇ ಬಾರಿ ಯಶಸ್ವಿಯಾಗಿ ಕರಗ ಹೊತ್ತಿದ್ದ ಜ್ಞಾನೇಂದ್ರ ಸ್ವಾಮಿ, ಈ ಸಲ 16ನೇ ಬಾರಿಗೆ ಕರಗ ಹೊರಲಿದ್ದಾರೆ

Share This Article