Ad image

1200ರಿಂದ 80 ರೂ.ಗೆ ಕುಸಿದ ಟೊಮ್ಯಾಟೋ ಬೆಲೆ – ರೈತರು ಕಂಗಾಲು

Team SanjeMugilu
1 Min Read

ವಿಜಯನಗರ: ಜಿಲ್ಲೆಯಲ್ಲಿ  ಟೊಮ್ಯಾಟೋ ಬೆಲೆ ಏಕಾಏಕಿ ಪಾತಾಳಕ್ಕೆ ಕುಸಿದಿದೆ. 1000-1200 ರೂ. ಇದ್ದ ಒಂದು ಬಾಕ್ಸ್ ಟೊಮ್ಯಾಟೋ ಬೆಲೆ 100-80 ರೂ.ಗೆ ಕುಸಿದಿದೆ. ಬೆಲೆ ಕುಸಿತದಿಂದ ರೈತರು ಹಾಗೂ ಮಾರಾಟಗಾರರು ನಷ್ಟ ಅನುಭವಿಸುತ್ತಿದ್ದಾರೆ.

ವ್ಯಾಪಾರಿಗಳು 20 ರೂ.ಗೆ 2 ರಿಂದ 4 ಕೆಜಿ ಟೊಮ್ಯಾಟೋವನ್ನು ಮಾರಾಟ ಮಾಡುತ್ತಿದ್ದಾರೆ. ಏಕಾಏಕಿ ಟೊಮ್ಯಾಟೋ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಸಾಲ ಮಾಡಿ ಟೊಮ್ಯಾಟೋ ಬೆಳೆದು ಮಾರುಕಟ್ಟೆಗೆ ತರೋ ರೈತರ  ಪರಿಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ.

ಇರಾನ್ – ಇಸ್ರೇಲ್ ಯುದ್ಧದಿಂದ ಬೇರೆ ದೇಶಗಳಿಗೆ ಟೊಮ್ಯಾಟೋ ರಫ್ತಾಗುತ್ತಿಲ್ಲ. ಅಲ್ಲದೇ ಸಿಲಿಂಡರ್ ಸಿಗದೇ ಹೋಟೆಲ್‍ಗಳು ಸರಿಯಾಗಿ ನಡೆಯದ ಹಿನ್ನೆಲೆ ಟೊಮ್ಯಾಟೋ ವ್ಯಾಪಾರ ಕುಸಿದಿದೆ. ಇದೇ ಕಾರಣಕ್ಕೆ ಟೊಮ್ಯಾಟೋ ಬೆಲೆ ಸಹ ಕುಸಿದಿದೆ.

Share This Article