Ad image

ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Team SanjeMugilu
0 Min Read

ಕೊಪ್ಪಳ: ಲೋಕಾಯುಕ್ತ ದಾಳಿ ವೇಳೆ 10 ಕೋಟಿ ರೂ. ಭ್ರಷ್ಟಾಚಾರ ಬಯಲಿಗೆ ಬಂದ ಹಿನ್ನೆಲೆ ಕೊಪ್ಪಳ  ನಗರಸಭೆಯ ಜೆಇ  ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಲಾಗಿದೆ.

2023-24 ಹಾಗೂ 24-25ನೇ ಸಾಲಿನಲ್ಲಿ ಕೆಲ ಕಾಮಗಾರಿಗಳಲ್ಲಿ ಸುಳ್ಳು ಬಿಲ್ ಹಾಕಿದ್ದು, ಒಟ್ಟು 366 ಕಾಮಗಾರಿಗಳಲ್ಲಿ 10 ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ. ಈ ಹಿಂದೆ ಲೋಕಾಯುಕ್ತ ದಾಳಿ ನಡೆಸಿದಾಗ ವಿಚಾರ ಬಯಲಿಗೆ ಬಂದಿದೆ.  ಸದ್ಯ ಪೌರಾಡಳಿತ ಇಲಾಖೆ ನಿರ್ದೇಶಕರು ಕೊಪ್ಪಳ ನಗರಸಭೆಯ ಜೆಇ ಸೋಮಲಿಂಗಪ್ಪ ಅವರನ್ನು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

Share This Article