Ad image

ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Team SanjeMugilu
0 Min Read

ನವದೆಹಲಿ: ಮಧ್ಯಪ್ರಾಚ್ಯ ಬಿಕ್ಕಟ್ಟಿನ ನಡುವೆಯೂ ದೇಶದ ಜನರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದೆ. ಪೆಟ್ರೋಲ್‌ ಮೇಲಿನ ಸುಂಕ 13 ರೂ. ನಿಂದ 3 ರೂಪಾಯಿಗೆ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನ 10 ರೂ. ನಿಂದ ಶೂನ್ಯಕ್ಕೆ ಇಳಿಕೆ ಮಾಡಿದೆ.

ಅಮೆರಿಕ ಮತ್ತು ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ, ಹಾರ್ಮುಜ್‌ ಜಲಸಂಧಿ ಬಿಕ್ಕಟ್ಟಿನಿಂದ ಭಾರತೀಯ ತೈಲ ಕಂಪನಿಗಳು ಎದುರಿಸುತ್ತಿರುವ ನಷ್ಟವನ್ನು ಸರಿದೂಗಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಆದ್ರೆ ಇದರಿಂದ ಗ್ರಾಹಕರಿಗೆ ಯಾವುದೇ ಉಳಿತಾಯವಾಗುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

Share This Article