Ad image

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ – ಹೈದರಾಬಾದ್‌ನಲ್ಲಿರೋ ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

Team SanjeMugilu
1 Min Read

ಹೈದರಾಬಾದ್‌: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. ಹಲವು ವರ್ಷಗಳಿಂದ ಸುಮಾರು 1.5 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಮನೆಯನ್ನು ಸೀಲ್‌ ಮಾಡಲಾಗಿದೆ.

2016 ರಲ್ಲಿ ನಿಧನರಾದ ಜಯಲಲಿತಾ ಅವರ ಕಾನೂನುಬದ್ಧ ಉತ್ತರಾಧಿಕಾರಿಗಳಿಗೆ ತೆರಿಗೆ ಮೊತ್ತವನ್ನು ಪಾವತಿಸುವಂತೆ ಹಲವಾರು ನೋಟಿಸ್‌ಗಳನ್ನು ನೀಡಲಾಗಿದೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀನಗರ ಕಾಲೊನಿ ಆಸ್ತಿ 2017 ರಿಂದ ಸುಸ್ತಿದಾರರಾಗಿದ್ದು, ಫೆಬ್ರವರಿಯಲ್ಲಿ ಮತ್ತೆ ಹೊಸ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮನೆಯನ್ನು ಹಿಂದೆ ಉದ್ಯಮಿ ವಿಜಯ್ ಮಲ್ಯ ಅವರಿಗೆ ಗುತ್ತಿಗೆ ನೀಡಲಾಗಿತ್ತು. ಆ ಅವಧಿಯಲ್ಲಿ ತೆರಿಗೆ ಬಾಕಿ ಹೆಚ್ಚಾಗಲು ಪ್ರಾರಂಭಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾ.31 ಕ್ಕೂ ಮೊದಲು ಎಲ್ಲಾ ಪ್ರಮುಖ ಆಸ್ತಿ ತೆರಿಗೆ ಬಾಕಿದಾರರ ವಿರುದ್ಧ ನಾಗರಿಕ ಸಂಸ್ಥೆ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಜಿಹೆಚ್‌ಎಂಸಿ ಆಯುಕ್ತ ಆರ್‌ವಿ ಕರ್ಣನ್ ಹೇಳಿದ್ದಾರೆ

Share This Article